Axiom 4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಮತ್ತೆ ವಿಳಂಬ, ಹೊಸ ದಿನಾಂಕ ಶೀಘ್ರದಲ್ಲೇ ಪ್ರಕಟ

ಜೂನ್ 22 ರ ಭಾನುವಾರದಂದು ನಡೆಯಲಿರುವ ಉಡಾವಣೆಯಿಂದ ಹಿಂದೆ ಸರಿಯಲು ನಾಸಾ ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ಹೊಸ ಉಡಾವಣಾ ದಿನಾಂಕವನ್ನು ನಿಗದಿಪಡಿಸಲಿದೆ ಎಂದು ಆಕ್ಸಿಯಮ್ ಸ್ಪೇಸ್ ಹೇಳಿಕೆಯಲ್ಲಿ ತಿಳಿಸಿದೆ.
Teams from ISRO, NASA and Axiom Space
ಗಗನಯಾತ್ರಿಗಳು
Updated on

ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಕಳುಹಿಸುವ ಮಹತ್ವಾಕಾಂಕ್ಷೆಯ 'ಆ್ಯಕ್ಸಿಯಂ–4' ಮಿಷನ್ ಮತ್ತೆ ಮುಂದೂಡಿಕೆಯಾಗಿದೆ.

ಜೂನ್ 22 ರ ಭಾನುವಾರದಂದು ನಡೆಯಲಿರುವ ಉಡಾವಣೆಯಿಂದ ಹಿಂದೆ ಸರಿಯಲು ನಾಸಾ ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ಹೊಸ ಉಡಾವಣಾ ದಿನಾಂಕವನ್ನು ನಿಗದಿಪಡಿಸಲಿದೆ ಎಂದು ಆಕ್ಸಿಯಮ್ ಸ್ಪೇಸ್ ಹೇಳಿಕೆಯಲ್ಲಿ ತಿಳಿಸಿದೆ.

ಬಾಹ್ಯಾಕಾಶ ನಿಲ್ದಾಣದ ಕಾರ್ಯಾಚರಣೆಗಳನ್ನು ಮೌಲ್ಯಮಾಪನ ಮಾಡುವುದನ್ನು ಮುಂದುವರಿಸಲು ಬಾಹ್ಯಾಕಾಶ ಸಂಸ್ಥೆಗೆ ಹೆಚ್ಚುವರಿ ಸಮಯ ಬೇಕಾಗುತ್ತದೆ. ಬಾಹ್ಯಾಕಾಶ ನಿಲ್ದಾಣದ ಪರಸ್ಪರ ಸಂಪರ್ಕಿತ ಮತ್ತು ಪರಸ್ಪರ ಅವಲಂಬಿತ ವ್ಯವಸ್ಥೆಗಳ ಕಾರಣದಿಂದಾಗಿ, ನಿಲ್ದಾಣವು ಹೆಚ್ಚುವರಿ ಸಿಬ್ಬಂದಿ ಸದಸ್ಯರಿಗೆ ಸಿದ್ಧವಾಗಿದೆ ಎಂದು ಖಚಿತಪಡಿಸಿಕೊಳ್ಳಲು ನಾಸಾ ಬಯಸುತ್ತಿದ್ದು, ಈ ಕುರಿತ ಮಾಹಿತಿ ಪರಿಶೀಲಿಸಲು ಬಾಹ್ಯಾಕಾಶ ಸಂಸ್ಥೆಗೆ ಕಾಲಾವಕಾಶ ತೆಗೆದುಕೊಳ್ಳುತ್ತಿದೆ. ಹೀಗಾಗಿ ಜೂ.22ರಂದು ಆರಂಭಿಸಬೇಕಿದ್ದ ಅಂತರಿಕ್ಷಯಾನವನ್ನು ಮುಂದೂಡಿಕೆ ಮಾಡಲಾಗುತ್ತಿದ್ದು, ಹೊಸ ಉಡಾವಣಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ.

ಜೂನ್‌ 11ರಂದುಫ್ಲಾರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್‌–9 ರಾಕೆಟ್‌ ಅನ್ನು ಉಡಾವಣೆ ಮಾಡಬೇಕಿತ್ತು. ಆದರೆ, ರಾಕೆಟ್‌ನಲ್ಲಿ ಇಂಧನ ಸೋರುತ್ತಿದ್ದ ಕಾರಣ ಕೊನೆಯ ಕ್ಷಣದಲ್ಲಿ ಉಡಾವಣೆಯನ್ನು ರದ್ದು ಮಾಡಲಾಗಿತ್ತು.

Teams from ISRO, NASA and Axiom Space
ಆಕ್ಸಿಯಮ್-4 ಬೆನ್ನೇರಿ: ಶುಭಾಂಶು ಶುಕ್ಲಾ ಐತಿಹಾಸಿಕ ಯಾನ (ಜಾಗತಿಕ ಜಗಲಿ)

ಮೇ 29, ಜೂನ್‌ 8 ಜೂನ್10 ಮತ್ತು ಜೂನ್ 19ರಂದು ಸಹ ರಾಕೆಟ್‌ ಉಡಾವಣೆಗೆ ದಿನಾಂಕ ನಿಗದಿ ಮಾಡಿ ಆನಂತರ ಮುಂದೂಡಲಾಗಿತ್ತು. ಉಡಾವಣೆ ಹಲವು ಬಾರಿ ಮುಂದೂಡಿಕೆ ಬಳಿಕ ಜೂನ್ 22ಕ್ಕೆ ಮತ್ತೆ ಸಮಯ ನಿಗದಿ ಮಾಡಲಾಗಿತ್ತು. ಇದೀಗ, ಆ ಸಮಯವನ್ನು ರದ್ದು ಮಾಡಲಾಗಿದೆ.

ಭಾರತೀಯ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ತೆರಳಲು ಸಿದ್ಧತೆ ನಡೆಸಿದ್ದು, ಈ ಯೋಜನೆಯಲ್ಲಿ, ಅವರು ಮಧುಮೇಹಕ್ಕೆ (ಸಕ್ಕರೆ ಕಾಯಿಲೆ) ಸಂಬಂಧಿಸಿದಂತೆ ಒಂದು ಮಹತ್ವದ ಪ್ರಯೋಗವನ್ನು ಕೈಗೊಳ್ಳಲಿದ್ದಾರೆ.

ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡಿದ್ದು, ಈ ಸಂಶೋಧನೆ, ವಿಜ್ಞಾನಿಗಳಿಗೆ ಮಧುಮೇಹವನ್ನು ಇನ್ನಷ್ಟು ಅರ್ಥೈಸಿಕೊಳ್ಳಲು, ಮತ್ತು ಬಾಹ್ಯಾಕಾಶದಲ್ಲಿ ಅದರ ಬದಲಾವಣೆಗಳನ್ನು ತಿಳಿಯಲು ನೆರವಾಗಲಿದೆ.

ಗಗನಯಾತ್ರಿಗಳು ತಮ್ಮ ಎರಡು ವಾರಗಳ ವಾಸದ ಅವಧಿಯಲ್ಲಿ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಶೂನ್ಯ ಗುರುತ್ವಾಕರ್ಷಣೆಯಲ್ಲಿ ಈ ಅಧ್ಯಯನ ಕೈಗೊಳ್ಳಲಿದ್ದಾರೆ. 'ಸೂಟ್ ರೈಡ್' ಎಂಬ ಹೆಸರು ಹೊಂದಿರುವ ಈ ಪ್ರಯೋಗ, ಇನ್ಸುಲಿನ್ ಅವಲಂಬಿತ ಗಗನಯಾತ್ರಿಗಳಿಗೆ (ಐಡಿಡಿಎಂ) ನೆರವಾಗುವ ನಿಟ್ಟಿನಲ್ಲಿ ಬಹುಮುಖ್ಯ ಪ್ರಯೋಗವಾಗಿದೆ. ಹಿಂದೆಲ್ಲ ಮಧುಮೇಹ ಎನ್ನುವುದು ಆಸಕ್ತರನ್ನೂ ಗಗನಯಾತ್ರೆಯಿಂದ ಅನರ್ಹಗೊಳಿಸಲು ಕಾರಣವಾಗಿತ್ತು. ಆದರೆ, ಈ ಯೋಜನೆ ಭವಿಷ್ಯದಲ್ಲಿ ಮಧುಮೇಹಿಗಳೂ ಗಗನಯಾತ್ರೆ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಪ್ರಗತಿ ಸಾಧಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com