ಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ಇಂದು ರಿಟ್ ಅರ್ಜಿ ವಿಚಾರಣೆ

ಕರ್ನಾಟಕದ ಬೆಳಗಾವಿ ಮತ್ತು ಕೆಲ ಮರಾಠಿ ಪ್ರಾಬಲ್ಯವಿರುವ ಸ್ಥಳಗಳನ್ನು ಮಹಾರಾಷ್ಟ್ರ ರಾಜ್ಯಕ್ಕೆ ಸೇರಿಸಬೇಕೆಂದು ಅಲ್ಲಿನ ಸರ್ಕಾರ...
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ನಡೆದ ಘರ್ಷಣೆಯಲ್ಲಿ ಪೊಲೀಸರ ಲಾಠಿ ಪ್ರಹಾರ( ಸಾಂದರ್ಭಿಕ ಚಿತ್ರ)
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ನಡೆದ ಘರ್ಷಣೆಯಲ್ಲಿ ಪೊಲೀಸರ ಲಾಠಿ ಪ್ರಹಾರ( ಸಾಂದರ್ಭಿಕ ಚಿತ್ರ)
ಬೆಳಗಾವಿ: ಕರ್ನಾಟಕದ ಬೆಳಗಾವಿ ಮತ್ತು ಕೆಲ ಮರಾಠಿ ಪ್ರಾಬಲ್ಯವಿರುವ ಸ್ಥಳಗಳನ್ನು ಮಹಾರಾಷ್ಟ್ರ ರಾಜ್ಯಕ್ಕೆ ಸೇರಿಸಬೇಕೆಂದು ಅಲ್ಲಿನ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ. ನ್ಯಾಯಮೂರ್ತಿಗಳಾದ ಕೆಹರ್, ಮಿಶ್ರಾ ಮತ್ತು ಗೋಪಾಲ್ ಗೌಡ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.
ಗಡಿ ವಿವಾದ ನ್ಯಾಯಾಂಗ ವ್ಯಾಪ್ತಿಗೆ ಬರುವುದಿಲ್ಲ.ಅದನ್ನು ಬಗೆಹರಿಸುವ ಹಕ್ಕು ಸಂಸತ್ತಿಗೆ ಮಾತ್ರ ಇದೆ, ಹಾಗಾಗಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ರಿಟ್ ಅರ್ಜಿಯನ್ನು ವಜಾಗೊಳಿಸಬೇಕೆಂದು ಕರ್ನಾಟಕ ಸರ್ಕಾರ ಸಲ್ಲಿಸಿರುವ ಮನವಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೊದಲು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂಬುದು ಕಾನೂನು ತಜ್ಞರ ಅಭಿಮತ. ಕರ್ನಾಟಕದ ಅರ್ಜಿ ಬಗ್ಗೆ ನಿರ್ಧಾರ ತೆಗೆದುಕೊಂಡ ನಂತರ ಅಪರಾಹ್ನ ಮಹಾರಾಷ್ಟ್ರ ಸರ್ಕಾರದ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಭಾಷಾವಾರು ಆಧಾರದ ಮೇಲೆ 1956ರಲ್ಲಿ ರಾಜ್ಯಗಳು ರಚನೆಗೊಂಡ ನಂತರ ಪ್ರಸ್ತುತ ಕರ್ನಾಟಕದಲ್ಲಿರುವ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಮತ್ತು ಸುಮಾರು 800 ಗ್ರಾಮಗಳು ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕೆಂದು ಅದು ಒತ್ತಾಯಿಸುತ್ತಲೇ ಬಂದಿದೆ. ಸಮಿತಿ ವರದಿ ಅದಕ್ಕೆ ವಿರುದ್ಧವಾಗಿರುವುದರಿಂದ 2004ರಲ್ಲಿ ಸಾಂವಿಧಾನಿಕ ಅನುಚ್ಛೇದ 131ರಡಿ ಕರ್ನಾಟಕದಲ್ಲಿನ ಮರಾಠಿಗರ ಒತ್ತಡದ ಮೇರೆಗೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಮತ್ತು ಸೂಟ್ ನ್ನು ಸಲ್ಲಿಸಿತ್ತು. 
ಕೇಸು 11 ವರ್ಷಗಳ ಹಿಂದೆ ಸಲ್ಲಿಸಿದ್ದರೂ ಕೂಡ ಮಹಾರಾಷ್ಟ್ರ ಸರ್ಕಾರ ಅರ್ಜಿ ಜೊತೆಗೆ ಸರಿಯಾದ ಸಾಕ್ಷಿ ನೀಡಲು ವಿಫಲವಾಗಿದ್ದರಿಂದ ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com