ಆಕೆಗೆ ತನ್ನ ಹತ್ತನೇ ವರ್ಷದಲ್ಲೇ ಮೂಳೆಯ ಕ್ಯಾನ್ಸರ್ ಕಾಣಿಸಿಕೊಂಡಿತ್ತು.ಇದರಿಂದ ಹಾಸಿಗೆ ಹಿಡಿದಿದ್ದ ಬಾಲಕಿ ಕುಟುಂಬದ ಸ್ನೇಹಿತರು, ಶಾಲೆಯ ಉಪಾದ್ಯಾಯರ ಸಹಕಾರದೊಡನೆ ಎರಡು ವರ್ಷದ ಬಳಿಕ ಗುಣಮುಖವಾಗಿದ್ದಳು. ಆದರೆ ಕೆಲವೇ ತಿಂಗಳ ಹಿಂದೆ ಮತ್ತೆ ಈ ಮಾರಕ ರೋಗ ಮರುಕಳಿಸಿತ್ತು. ಖಾಯಿಲೆಯೊಡನೆ ಹೋರಾಡುತ್ತಲೇ ವ್ಯಾಸಂಗ ಮುಂದುವರಿಸಿದ್ದ ಪ್ರತೀಕ್ಷಾ ಗುರುವಾರ (ನವೆಂಬರ್ 01)ರಂದು ಕೊನೆಯುಸಿರೆಳೆದಿದ್ದಾಳೆ.