ವಕೀಲೆಯಿಂದ ವಿದೇಶಾಂಗ ಸಚಿವೆವರೆಗೆ-ಸುಷ್ಮಾ ಸ್ವರಾಜ್ ಬದುಕಿನ ಹಾದಿ

ಹಿರಿಯ ರಾಜಕಾರಣಿ, ಬಿಜೆಪಿಯ ಜನಪ್ರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನಾರಾಗಿದ್ದಾರೆ. ತೀವ್ರ ಹೃದಯಾಘಾತದಿಂದಾಗಿ ಸ್ವರಾಜ್ ಮಂಗಳವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್
ಹಿರಿಯ ರಾಜಕಾರಣಿ, ಬಿಜೆಪಿಯ ಜನಪ್ರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನಾರಾಗಿದ್ದಾರೆ. ತೀವ್ರ ಹೃದಯಾಘಾತದಿಂದಾಗಿ ಸ್ವರಾಜ್ ಮಂಗಳವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಬಾರಿಯ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಸುಷ್ಮಾ ಸ್ವರಾಜ್ ಹರಿಯಾಣದ ಅಂಬಾಲಾ ಮೂಲದವಾರಾಗಿದ್ದಾರೆ.
ಸುಪ್ರೀಂ ಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸಿದ್ದ ಸುಷ್ಮಾ ಸ್ವರಾಜ್ ಏಳು ಬಾರಿ ಸಂಸದರಾಗಿ, ಮೂರು ಬಾರಿ ದೆಹಲಿ, ಹರಿಯಾಣದ ವಿಧಾನಸಬೆ ಸದಸ್ಯೆಯಾಗಿ ಕಾರ್ಯ ನಿರ್ವಹಿಸಿದ್ದರು.
ಸುಷ್ಮಾ ಸ್ವರಾಜ್ ಅವರು 1952ಫೆಬ್ರುವರಿ 14ರಂದು ಹರಿಯಾಣದ ಅಂಬಾಲಾ ಕ್ಯಾಂಟ್ ನಲ್ಲಿ ಜನಿಸಿದರು. ಇವರ ತಂದೆ ಹಾರ್ದೇವ್ ಶರ್ಮಾ ಮತ್ತು ತಾಯಿ ಲಕ್ಷ್ಮಿ ದೇವಿ. ಅವರು ಅಂಬಾಲಾ ಕಂಟೋನ್ಮೆಂಟ್ನ ಸನಾತನ ಧರ್ಮ ಕಾಲೇಜಿನಲ್ಲಿ ಸಂಸ್ಕೃತ ಮತ್ತು ರಾಜ್ಯಶಾಸ್ತ್ರ ವಿಷಯಗಳಲ್ಲಿ ಪದವಿಯನ್ನು ಪಡೆದರು. ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಭ್ಯಾಸ ಮಾಡಿದರು 1973ರಲ್ಲಿ ರಲ್ಲಿ ಭಾರತದ ಸುಪ್ರೀಂ ಕೋರ್ಟ್ ನಲ್ಲಿ ವಕೀಲರಾಗಿ ವೃತ್ತಿ ಪ್ರಾರಂಭಿಸಿದ್ದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಯೊಡನೆ ರಾಜಕೀಯ ಜೀವನ ಪ್ರಾರಂಭಿಸಿದ್ದ ಸುಷ್ಮಾ ಅವರ ಪತಿ ಸ್ವರಾಜ್ ಕೌಶಲ್, ಸಮಾಜವಾದಿ ನಾಯಕ ಜಾರ್ಜ್ ಫರ್ನಾಂಡಿಸ್ ಅವರೊಡನೆ  ನಿಕಟ ಸಂಬಂಧ ಹೊಂದಿದ್ದರು ಮತ್ತು ಸುಷ್ಮಾ ಸ್ವರಾಜ್ 1975ರಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಕಾನೂನು ರಕ್ಷಣಾ ತಂಡದ ಅಂಗವಾಗಿದ್ದರು. ಜಯಪ್ರಕಾಶ್ ನಾರಾಯಣ ಅವರ ಕ್ರಾಂತಿಯ  ಚಳುವಳಿಯಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಂಡರು. ತುರ್ತು ಪರಿಸ್ಥಿತಿಯ ನಂತರ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. ನಂತರ ಅವರು ಬಿಜೆಪಿಯ ರಾಷ್ಟ್ರೀಯ ನಾಯಕಿಯಾಗಿ ಬೆಳೆದರು.
 1977 ರಿಂದ 1982ರವರೆಗೆ ಹರಿಯಾಣ ವಿಧಾನಸಭೆಯ ಸದಸ್ಯರಾಗಿದ್ದ ಸ್ವರಾಜ್ 25ನೇ ವಯಸ್ಸಿನಲ್ಲಿ ಅಂಬಾಲಾ ಕಂಟೋನ್ಮೆಂಟ್ ಶಾಸನ ಸಭೆಗೆ ಆಯ್ಕೆಯಾಗಿದ್ದರು. 1977 ರ ಜುಲೈನಲ್ಲಿ ಆಗಿನ ಮುಖ್ಯಮಂತ್ರಿ ದೇವಿ ಲಾಲ್ ಅವರ ನೇತೃತ್ವದಲ್ಲಿ ಜನತಾ ಪಕ್ಷದ ಸರಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು. ಅವರು 1979ರಲ್ಲಿ ಹರಿಯಾಣ ರಾಜ್ಯದ ಜನತಾ ಪಕ್ಷದ ರಾಜ್ಯಾಧ್ಯಕ್ಷೆಯಾಗಿದ್ದರು.  ಅವರು 1987 ರಿಂದ1990ರ ಅವಧಿಯಲ್ಲಿ ಭಾರತೀಯ ಜನತಾ ಪಾರ್ಟಿ-ಲೋಕಸಭೆ ಒಕ್ಕೂಟದ ಸರಕಾರದಲ್ಲಿ ಹರಿಯಾಣದ ಶಿಕ್ಷಣ ಸಚಿವೆಯಾಗಿದ್ದರು.
ಸುಷ್ಮಾ ಸ್ವರಾಜ್ ನಿರ್ವಹಿಸಿದ್ದ ವಿವಿಧ ಹುದ್ದೆಗಳ ಜವಾಬ್ದಾರಿಯುತ ಸ್ಥಾನಗಳ ವಿವರ ಹೀಗಿದೆ-
1977-82ರಲ್ಲಿ ಹರಿಯಾಣಾ ವಿಧಾನಸಭೆಯ ಸದಸ್ಯರಾಗಿ ಚುನಾಯಿತರಾದರು
1977-79 ಕ್ಯಾಬಿನೆಟ್ ಮಂತ್ರಿ, ಕಾರ್ಮಿಕ ಮತ್ತು ಉದ್ಯೋಗ, ಹರಿಯಾಣ ಸರ್ಕಾರ
1987-90  ಹರಿಯಾಣಾ ವಿಧಾನಸಭೆಯ ಸದಸ್ಯರಾಗಿ ಚುನಾಯಿತರಾದರು
1987-90  ಕ್ಯಾಬಿನೆಟ್ ಮಂತ್ರಿ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು, ಹರಿಯಾಣ ಸರ್ಕಾರ
1990-96 ರಲ್ಲಿ ರಾಜ್ಯಸಭೆಗೆ ಆಯ್ಕೆ (೧ ನೇ ಅವಧಿ)
1996-97 ಹನ್ನೊಂದನೇ ಲೋಕಸಭೆ ಸದಸ್ಯೆ,(ಎರಡನೆಯ ಅವಧಿ)
1996[16 ಮೇ - 1ಜೂನ್] - ಯೂನಿಯನ್ ಕ್ಯಾಬಿನೆಟ್ ಮಂತ್ರಿ, ಮಾಹಿತಿ ಮತ್ತು ಪ್ರಸಾರ
1998-99 [10ಮಾರ್ಚ್ 1998- 26 ಏಪ್ರಿಲ್ 1999] ಹನ್ನೆರಡನೆಯ ಲೋಕಸಭೆ ಸದಸ್ಯೆ,(3 ನೇ ಅವಧಿ)
1998 [19ಮಾರ್ಚ್ - 12ಅಕ್ಟೋಬರ್] ಯೂನಿಯನ್ ಕ್ಯಾಬಿನೆಟ್ ಮಂತ್ರಿ, ಮಾಹಿತಿ ಮತ್ತು ಪ್ರಸಾರ ಮತ್ತು ದೂರಸಂಪರ್ಕ
1998 [೧೩ ಅಕ್ಟೋಬರ್ - ೩ ಡಿಸೆಂಬರ್] ದೆಹಲಿಯ ಮುಖ್ಯಮಂತ್ರಿ
೧೯೯೮[ನವೆಂಬರ್] - ದೆಹಲಿ ಅಸೆಂಬ್ಲಿಯ ಹಾಝ್ ಖಾಸ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು
2000-06 ರಾಜ್ಯಸಭೆ ಸದಸ್ಯೆ,(4ನೇ ಅವಧಿ)
2000-03 [30 ಸೆಪ್ಟೆಂಬರ್ 2000-29 ಜನವರಿ 2003] ಮಾಹಿತಿ ಮತ್ತು ಪ್ರಸಾರ ಮಂತ್ರಿ
2003-04[29 ಜನವರಿ 2003-22 ಮೇ 2004] ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮತ್ತು ಸಂಸದೀಯ ವ್ಯವಹಾರಗಳ ಸಚಿವೆ
2006-09 ರಾಜ್ಯಸಭೆ ಸದಸ್ಯೆ,(5 ನೇ ಅವಧಿ)
2009-14[16 ಮೇ 2009-18ಮೇ 2014]15ನೇ ಲೋಕಸಭೆ ಸದಸ್ಯೆ,(6ನೇ ಅವಧಿ)
2009[3 ಜೂನ್ 2009- 21 ಡಿಸೆಂಬರ್ 2009] ಲೋಕಸಭೆಯಲ್ಲಿ ಪ್ರತಿಪಕ್ಷದ ಉಪ ನಾಯಕಿ
2009-14[21 ಡಿಸೆಂಬರ್ 2009- 18ಮೇ 2014]ಲಾಲ್ ಕೃಷ್ಣ ಆಡ್ವಾಣಿ ಬದಲಿಗೆ ಪ್ರತಿಪಕ್ಷ ನಾಯಕಿ
2014[26 ಮೇ]16 ನೇ ಲೋಕಸಭೆ ಸದಸ್ಯೆ,(7 ನೇ ಅವಧಿ)
2014-2019 ಭಾರತದ ಒಕ್ಕೂಟದ ವಿದೇಶಾಂಗ ಸಚಿವೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com