ಡಾ.ಬಿ.ಸಿ ರಾಯ್ ನೆನಪಿನಲ್ಲಿಂದು ರಾಷ್ಟ್ರೀಯ ವೈದ್ಯರ ದಿನಾಚರಣೆ

ಕೊರೋನಾ ವೈರಸ್ ಕಾರಣದಿಂದ ಇಡೀ ವಿಶ್ವವೇ ಕಂಗಾಲಾಗಿರುವ ಈ ಸಂದರ್ಭದಲ್ಲಿ ಎಲ್ಲರ ಪಾಲಿಗೂ ದೇವರಾರಿ ಕಾಣುತ್ತಿರುವುದು ವೈದ್ಯರು. ಕೊರೋನಾ ವೈರಸ್ ಎಂದಾಕ್ಷಣ ಪ್ರತೀಯೊಬ್ಬ ವ್ಯಕ್ತಿಯೂ ಬೆಚ್ಚಿ ಬೀಳುತ್ತಿರುವ ಈ ಸಂದರ್ಭದಲ್ಲಿ ವೈರಸ್ ವಿರುದ್ಧ ಹೋರಾಡುತ್ತಿರುವುದು ವೈದ್ಯರೇ. ಹಾಗಾಗಿ ಇಡೀ ವೈದ್ಯ ಸಮೂಹಕ್ಕೆ ಸಮಾಜ ಕೃತಜ್ಞರಾಗಿರಬೇಕು.
ಡಾ.ಬಿ.ಸಿ ರಾಯ್
ಡಾ.ಬಿ.ಸಿ ರಾಯ್

ಕೊರೋನಾ ವೈರಸ್ ಕಾರಣದಿಂದ ಇಡೀ ವಿಶ್ವವೇ ಕಂಗಾಲಾಗಿರುವ ಈ ಸಂದರ್ಭದಲ್ಲಿ ಎಲ್ಲರ ಪಾಲಿಗೂ ದೇವರಾರಿ ಕಾಣುತ್ತಿರುವುದು ವೈದ್ಯರು. ಕೊರೋನಾ ವೈರಸ್ ಎಂದಾಕ್ಷಣ ಪ್ರತೀಯೊಬ್ಬ ವ್ಯಕ್ತಿಯೂ ಬೆಚ್ಚಿ ಬೀಳುತ್ತಿರುವ ಈ ಸಂದರ್ಭದಲ್ಲಿ ವೈರಸ್ ವಿರುದ್ಧ ಹೋರಾಡುತ್ತಿರುವುದು ವೈದ್ಯರೇ. ಹಾಗಾಗಿ ಇಡೀ ವೈದ್ಯ ಸಮೂಹಕ್ಕೆ ಸಮಾಜ ಕೃತಜ್ಞರಾಗಿರಬೇಕು. ಈ ಜುಲೈ 1 ವೈದ್ಯರಿಗೆ ಕೃತಜ್ಞತೆ ಸಲ್ಲಿಸುವುದಕ್ಕೆ ಮೀಸಲಾದರೆ ಅದೇ ಈ ದಿನದ ಸಾರ್ಥಕತೆಯಾಗಲಿದೆ.

ಭಾರತದಲ್ಲಿ ಜುಲೈ.1 ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. ಅದಕ್ಕೊಂದು ಕಾರಣವೂ ಇದೆ. ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದ ಡಾ.ಬಿದಾನ್ ಚಂದ್ರ ರಾಯ್ ಅವರ ನೆನಪಲ್ಲಿ ಜುಲೈ.1ನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ. 

ಅವರೊಬ್ಬ ಅಸಾಧಾರಣ ವೈದ್ಯರಾಗಿದ್ದವರು. ಅವರ ಗಣನೀಯ ಸೇವೆಯನ್ನು ಪರಿಗಣಿಸಿ 1961ರ ಫೆಬ್ರವರಿ 4ರಂದು ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿತ್ತು. ಕುತೂಹಲಕರ ವಿಚಾರವೆಂದರೆ ಅವರು ಜನಿಸಿದ್ದು 1882, ಜು.1. ತೀರಿಕೊಂಡಿದ್ದು, 1962 ಜುಲೈ.1. ಅವರು ಜನಿಸಿದ ದಿನ ಮತ್ತು ತೀರಿಕೊಂಡ ದಿನ ಒಂದೇ ಆಗಿದೆ. 

ಒಬ್ಬ ಮಾದರಿ ವೈದ್ಯರಾಗಿ ತಮ್ಮ ಬದುಕು ಸವೆಸಿದ ಅವರ ನೆನಪಿನಲ್ಲೇ ರಾಷ್ಟ್ರೀಯ ವೈದ್ಯರ ದಿನ ಆಚರಿಸಬೇಕು ಎಂದು ನಿರ್ಧರಿಸಿದ ಭಾರತ ಸರ್ಕಾರ 1991ರಲ್ಲಿ ಜುಲೈ 1ನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲು ಕರೆಕೊಟ್ಟಿತು. 

ರಾಯ್ ಅವರು ಅಪ್ರತಿಮ ವೈದ್ಯರಾಗಿದ್ದರು. ತಮ್ಮ ದೂರದೃಷ್ಟಿ ನಿಲುವುಗಳಿಂದ ವೈದ್ಯಲೋಕಕ್ಕೆ ಅಪರೂಲದ ಕೊಡುಗೆ ಕೊಟ್ಟವರು. ಮೇಲು ಕೀಳು ನೋಡದೆ, ಭೇದಭಾವ ಮಾಡದೆ ಎಲ್ಲರನ್ನೂ ಒಂದೇ ರೀತಿ ನೋಡಿದ ಜನಮೆಚ್ಚಿದ ವೈದ್ಯರಾಗಿದ್ದ ರಾಯ್, ಹೊಸತನದ ಆಲೋಚನೆಗಳನ್ನು ಹೊಂದಿದ್ದರು. 

1905ರಲ್ಲಿ ಅವರು ಕೋಲ್ಕತಾ ವಿವಿಯಲ್ಲಿ ಓದುತ್ತಿರುವಾಗ ಬಂಗಾಳ ವಿಭಜನೆಯಾಯಿತು. ಸ್ವಾತಂತ್ರ್ಯ ಹೋರಾಟದಲ್ಲೂ ಭಾಗಿಯಾಗಿದ್ದ ರಾಯ್ ಅವರು ಕೆಲ ಕಾಲ ಮಹಾತ್ಮ ಗಾಂಧೀಜಿಯ ವೈದ್ಯರೂ ಆಗಿದ್ದರು ಎನ್ನುವುದು ವಿಶೇಷ. ಅವರು ವೈದ್ಯರಾಗಿದ್ದೂ ಅಲ್ಲದೆ ಆಡಳಿತದಲ್ಲೂ ಮುಂದೆ ನಿಂತು ಕೆಲಸ ಮಾಡಿದ್ದು, ಅಚ್ಚರಿ ತರುವಂತಹದ್ದು. 

ಅನೇಕ ದೊಡ್ಡ ಆಸ್ಪತ್ರೆಗಳು ಅವರ ಕಾಲದಲ್ಲಿ ಸ್ಥಾಪನೆಯಾಗಿದೆ. ಸುಮಾರು 14 ವರ್ಷಗಳ ಕಾಲ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಅವರು ಆ ಸಮಯದಲ್ಲೂ ರೋಗಿಗಳ ಶುಶ್ರೂಷೆ ಮಾಡುತ್ತಿದ್ದರು. ಆ ಕಾರಣಕ್ಕೆ ಜನರ ಒಲವು ಗಳಿಸಿದ್ದರು. ಇಂತಹ ಮಹತ್ವದ ವೈದ್ಯರ ನೆನಪಿನಲ್ಲಿ ಭಾರತದಲ್ಲಿ ಜು.1ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com