ಜೂನ್‌ 21ರಂದೇ ವಿಶ್ವ ಯೋಗ ದಿನ ಆಚರಣೆ ಏಕೆ?

ಪ್ರಾಚೀನ ಭಾರತದ ಪರಂಪರೆಯ ಅತಿ ಮಹತ್ವದ ಕೊಡುಗೆ ಎಂದರೆ ಅದು ಯೋಗ. ಇದು ದೇಹ ಮತ್ತು ಮನಸನ್ನು ಒಳಗೊಂಡಿದೆ. ಯೋಚನೆ ಮತ್ತು ಕ್ರಮ, ನಿಯಂತ್ರಣ ಮತ್ತು ಈಡೇರುವಿಕೆ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಬಾಂಧವ್ಯವೇ ಯೋಗ.

Published: 20th June 2022 08:33 PM  |   Last Updated: 21st June 2022 03:07 PM   |  A+A-


International Yoga Day

ಯೋಗ ದಿನಾಚರಣೆ

Online Desk

ಬೆಂಗಳೂರು: ಪ್ರಾಚೀನ ಭಾರತದ ಪರಂಪರೆಯ ಅತಿ ಮಹತ್ವದ ಕೊಡುಗೆ ಎಂದರೆ ಅದು ಯೋಗ. ಇದು ದೇಹ ಮತ್ತು ಮನಸನ್ನು ಒಳಗೊಂಡಿದೆ. ಯೋಚನೆ ಮತ್ತು ಕ್ರಮ, ನಿಯಂತ್ರಣ ಮತ್ತು ಈಡೇರುವಿಕೆ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಬಾಂಧವ್ಯವೇ ಯೋಗ.

ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಸಾಧನ. ಯೋಗ ಕೇವಲ ವ್ಯಾಯಾಮವಲ್ಲ, ಇದು ವಿಶ್ವ ಮತ್ತು ಪ್ರಕೃತಿಯೊಂದಿಗೆ ನಮ್ಮತನವನ್ನು ಒಂದಾಗಿಸುವ ವಿದ್ಯೆಯಾಗಿದೆ. ಯೋಗವು ಬದುಕನ್ನು ಬದಲಿಸುವ ಮತ್ತು ಆತ್ಮಸಾಕ್ಷಿಯ ಸೃಷ್ಟಿ. ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ. ಇದು ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ. ಯೋಗವು ವ್ಯಾಯಮ ಮಾತ್ರವಲ್ಲದೇ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೇಯೆ ಪ್ರಕೃತಿ ಮತ್ತು ಮನುಷ್ಯನ ನಡೆವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ.

ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಪ್ರತಿವರ್ಷ ಯೊಗದ ದಿನಾಚರಣೆಯು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ. ಯೋಗ ದಿನಾಚರಣೆ ಆಚರಣೆ ಬಗ್ಗೆ 2014 ಸೆಪ್ಟೆಂಬರ್‌ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ಪ್ರಸ್ತಾಪವನ್ನು ಮಂಡಿಸಿದ್ದರು. ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಮೊದಲ ಬಾರಿ ಅಧಿಕಾರ ವಹಿಸಿಕೊಂಡ ವರ್ಷವೇ 2014ರ ಸೆಪ್ಟೆಂಬರ್‌ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗದ ಮಹತ್ವವನ್ನು ಸಾರಿದರು. ಯೋಗವು ವಿಶ್ವ ಶಾಂತಿಗೂ ಪೂರಕ ಎನ್ನುವುದನ್ನು ವಿಶ್ವ ಸಂಸ್ಥೆಯ ಸದಸ್ಯರ ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಟ್ಟರು. ಆ ವೇಳೆ ವಿಶ್ವ ಸಂಸ್ಥೆಯ ಮುಂದೆ ಯೋಗ ದಿನ ಆಚರಣೆಯ ಪ್ರಸ್ತಾವನೆಯನ್ನು ಮುಂದಿಟ್ಟರು. ಇದನ್ನು ವಿಶ್ವ ಸಂಸ್ಥೆ ಮಾನ್ಯ ಮಾಡಿತು.

PHOTOS: ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸುಂದರ, ಮನೋಲ್ಲಾಸಕರ ಫೋಟೋಗಳು

ನಂತರ ತನ್ನ ಎಲ್ಲ ಸದಸ್ಯ ರಾಷ್ಟ್ರಗಳ ಅಭಿಪ್ರಾಯ ಸಂಗ್ರಹಿಸಿ, 2015ರಲ್ಲಿ ಜೂನ್‌ 21ನ್ನು ವಿಶ್ವ ಯೋಗ ದಿನ ಎಂದು ಘೋಷಿಸಿತು. ಅದರೊಂದಿಗೆ, ಭಾರತಕ್ಕಷ್ಟೇ ಸೀಮಿತವಾಗಿದ್ದ, ಕೆಲವು ಆಸಕ್ತ ವಿದೇಶಿಗರಷ್ಟೇ ಮಾಡುತ್ತಿದ್ದ ಯೋಗವನ್ನು ಪ್ರಪಂಚದಾದ್ಯಂತ ಸಾಮೂಹಿಕವಾಗಿ ಅಭ್ಯಸಿಸುವಂತೆ ಮಾಡುವಲ್ಲಿ ಮೋದಿ ಯಶಸ್ವಿಯಾದರು.

ವಿರೋಧವಿಲ್ಲದೆ 177 ರಾಷ್ಟ್ರಗಳ ಒಪ್ಪಿಗೆ:
ಪ್ರಧಾನಿ ಮೋದಿ ಅವರ ಭಾಷಣದ ಬಳಿಕ 2014ರ ಡಿಸೆಂಬರ್‌ 11ರಂದು ವಿಶ್ವ ಸಂಸ್ಥೆಯಲ್ಲಿ ಮಸೂದೆಯೊಂದನ್ನು ಮಂಡಿಸಲಾಯಿತು. ಭಾರತದ ವಿಶ್ವ ಸಂಸ್ಥೆಯ ಪ್ರತಿನಿಧಿ ಅಶೋಕ್‌ ಮುಖರ್ಜಿ ಅವರು ಕರಡನ್ನು ಸಿದ್ಧಪಡಿಸಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಿದರು. ಈ ಕರಡಿಗೆ ಯಾವುದೇ ವಿರೋಧವಿಲ್ಲದೆ 177 ದೇಶಗಳು ಒಪ್ಪಿದವು. ಒಂದೂ ಮತ ಚಲಾವಣೆಯಾಗದೆ ಯೋಗ ದಿನ ಆಚರಣೆಯ ಕರಡು ಪ್ರತಿ ಅಂಗೀಕಾರವಾಯಿತು. ಬಳಿಕ ಮಸೂದೆಯನ್ನು ಅಂಗೀಕರಿಸಲಾಯಿತು. ಇದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ತಕರಾರು ಇಲ್ಲದೆ, ಹೆಚ್ಚಿನ ಬೆಂಬಲ ಪಡೆದು ಅಂಗೀಕಾರಗೊಂಡ ಮಸೂದೆ ಎಂಬ ಖ್ಯಾತಿಯನ್ನು ಹೊಂದಿದೆ.

ಜೂನ್‌ 21ರಂದೇ ಏಕೆ?:
ಇಡೀ ವರ್ಷದಲ್ಲಿ ಜೂನ್‌ 21ರಂದು ಭೂಮಿಯ ಉತ್ತರ ಭಾಗದಲ್ಲಿ ಅಧಿಕ ದಿನ ಇರುತ್ತದೆ. ಅಂದರೆ ಅಂದು ಉತ್ತರ ಭಾಗದಲ್ಲಿ ಹಗಲು ದೀರ್ಘಾವಧಿಯಾಗಿರುತ್ತದೆ. ದಕ್ಷಿಣದಲ್ಲಿ ಹಗಲಿನ ಅವಧಿ ಕಡಿಮೆ ಇರುತ್ತದೆ. ಅಂದು ಸೂರ್ಯ ತನ್ನ ಪಥವನ್ನು ದಕ್ಷಿಣದತ್ತ ಬದಲಿಸುತ್ತಾನೆ. ಅಂದು ಸಾಮಾನ್ಯವಾಗಿ ಹುಣ್ಣಿಮೆಯಾಗಿದ್ದು, ಗುರುಪೂರ್ಣಿಮ ದಿನವಾಗಿರುತ್ತದೆ. ಇದು ಯೋಗ ಮಾಡಲು ಅಥವಾ ಆರಂಭಿಸಲು ಸೂಕ್ತ ದಿನವಾಗಿದೆ. ಹೀಗೆಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಅದನ್ನೂ ವಿಶ್ವಸಂಸ್ಥೆ ಮಾನ್ಯ ಮಾಡಿದೆ.

ಮೊದಲ ವಿಶ್ವ ಯೋಗ ದಿನದ ದಾಖಲೆ:
ಭಾರತದಲ್ಲಿ ಯೋಗ ದಿನಕ್ಕೆ ಬೇಕಾದ ತಯಾರಿಯನ್ನು ಕೇಂದ್ರ ಸರ್ಕಾರದ ಆಯುಷ್‌ ಇಲಾಖೆ ವ್ಯವಸ್ಥೆ ಮಾಡುತ್ತದೆ. 2015ರ ಜೂ.21ರಂದು ಆಚರಿಸಲಾದ ಮೊಟ್ಟಮೊದಲ ವಿಶ್ವ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ, 84 ದೇಶಗಳ ಪ್ರತಿನಿಧಿಗಳು ಸೇರಿದಂತೆ 35,985 ಜನರು ನವದೆಹಲಿಯ ರಾಜಪಥ್‌ನಲ್ಲಿ 35 ನಿಮಿಷ 21 ಆಸನಗಳನ್ನು ಪ್ರದರ್ಶಿಸಿದರು. ಇದನ್ನು ವಿಶ್ವದ ಲಕ್ಷಾಂತರ ಜನ ವೀಕ್ಷಿಸಿದರು. ಏಕಕಾಲದಲ್ಲಿ ಇದು ಎರಡು ಗಿನ್ನೆಸ್‌ ದಾಖಲೆಗಳನ್ನು ಬರೆಯಿತು. ಒಂದೇ ಬಾರಿಗೆ 35,985 ಜನರು ಏಕಕಾಲಕ್ಕೆ ಒಂದೆಡೆ ಯೋಗ ಅಭ್ಯಾಸ ಮಾಡಿದ್ದು ಮೊದಲ ದಾಖಲೆ ಆದರೆ, ಒಂದೇ ಬಾರಿಗೆ 84 ದೇಶದ ಪ್ರತಿನಿಧಿಗಳು ಯೋಗದಲ್ಲಿ ಭಾಗವಹಿಸಿದ್ದು ಮತ್ತೊಂದು ದಾಖಲೆಯಾಯಿತು.

ಇದನ್ನೂ ಓದಿ: ಯೋಗದಿಂದ ಸಮಾಜಕ್ಕೆ, ದೇಶಕ್ಕೆ, ವಿಶ್ವಕ್ಕೆ ಶಾಂತಿ ಸಿಗುತ್ತದೆ: ಮೈಸೂರಿನಲ್ಲಿ ಪ್ರಧಾನಿ ಮೋದಿ

2015 ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸ್ಮರಣಾರ್ಥವಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ 10 ರೂಪಾಯಿಯ ನಾಣ್ಯವನ್ನು ಬಿಡುಗಡೆ ಮಾಡಲಾಗಿತ್ತು. ಅಮೆರಿಕದ ಸ್ಯಾನ್‌ಫ್ರ್ಯಾನ್ಸಿಸ್ಕೋದ ಮರಿನಾ ಗ್ರೀನ್‌ ಪಾರ್ಕ್ನಲ್ಲಿ 5 ಸಾವಿರ ಜನರು ಸಾಮೂಹಿಕವಾಗಿ ಯೋಗ ಮಾಡಿದರು. ಅಲ್ಲದೆ ಜಗತ್ತಿನ ನಾನಾ ದೇಶಗಳಲ್ಲಿ ಭಾರತೀಯರು ಹಾಗೂ ವಿದೇಶಿಗರೂ ಸೇರಿದಂತೆ ಲಕ್ಷಾಂತರ ಜನರು ಯೋಗಾಸನಗಳನ್ನು ಪ್ರದರ್ಶಿಸಿದರು. ಅತ್ತ ಭಾರತದ ಆಯುಷ್‌ ಇಲಾಖೆ 2 ಗಿನ್ನೆಸ್‌ ದಾಖಲೆ ಮಾಡಿದರೆ ಇತ್ತ ಎನ್‌ಸಿಸಿ ವಿದ್ಯಾರ್ಥಿಗಳು ಮತ್ತೊಂದು ದಾಖಲೆ ಬರೆದರು. ವಿವಿಧ ಸ್ಥಳಗಳಲ್ಲಿ ಒಂದೇ ಬಾರಿಗೆ ಒಂದೇ ಸಮವಸ್ತ್ರದಲ್ಲಿ ದೊಡ್ಡ ಮಟ್ಟದಲ್ಲಿ ಅವರು ಯೋಗದಲ್ಲಿ ಭಾಗವಹಿಸಿದ್ದು ಲಿಮ್ಕಾ ಪುಸ್ತಕದಲ್ಲಿ ದಾಖಲಾಯಿತು.

2016: ವಿಶ್ವಸಂಸ್ಥೆಯಲ್ಲಿ ಸದ್ಗುರು ಜಗ್ಗಿ ಯೋಗ:-
2015ರ ಯೋಗದ ದಿನದ ಯಶಸ್ಸಿನಿಂದ ಸ್ಫೂರ್ತಿಗೊಂಡ ಭಾರತ ಸರ್ಕಾರವು 2016ರ ವಿಶ್ವ ಯೋಗ ದಿನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸಲು ನಿಶ್ಚಯಿಸಿತು. ಆಯುಷ್‌ ಇಲಾಖೆಯು ಯೋಗ ದಿನಕ್ಕೆ ರಾಷ್ಟ್ರೀಯ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ಕಾರ‍್ಯಕ್ರಮ ಎಂದು ನಾಮಕರಣ ಮಾಡಿತು. ಅಂದು ಚಂಡೀಗಢದಲ್ಲಿ ನಡೆದ ಕಾರ‍್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಅತ್ತ ವಿಶ್ವ ಸಂಸ್ಥೆಯಲ್ಲಿನ ಭಾರತದ ಶಾಶ್ವತ ವಿಭಾಗವು ಜೂ.20, 21ರಂದು ಯೋಗ ದಿನ ಆಚರಿಸಿತು. ಅಲ್ಲದೆ ವಿಶೇಷ ಕಾರ‍್ಯಕ್ರಮ ಆಯೋಜಿಸಿ ಅದಕ್ಕೆ ‘ಯೋಗ ಸಾಧಕರೊಂದಿಗೆ ಸಂವಾದ- ಸಮಗ್ರ ಅಭಿವೃದ್ಧಿಯ ಗುರಿ ಸಾಧನೆಗಾಗಿ ಯೋಗ’ ಎಂದು ಹೆಸರಿಟ್ಟಿತ್ತು. ಅದಕ್ಕೆ ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್‌ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು.

2017: ಟೈಮ್ಸ್‌ ಸ್ಕ್ವೇರ್‌ನಲ್ಲಿ ಸಾಮೂಹಿಕ ಯೋಗ:-
2017ರಲ್ಲಿ ನಡೆದ ಯೋಗ ದಿನ ಹಲವು ಕಾರಣಗಳಿಗಾಗಿ ಮಹತ್ವವನ್ನು ಪಡೆದುಕೊಂಡಿತು. ಉತ್ತರ ಪ್ರದೇಶದ ಲಕ್ನೋದಲ್ಲಿ 51 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗ ಮಾಡಿದರು. ಹಲವು ಉದ್ಯಮಿಗಳು ಯೋಗ ದಿನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಅತ್ತ ಅಮೆರಿಕದ ನ್ಯೂಯಾರ್ಕ್ನ ಟೈಮ್ಸ್‌ ಸ್ಕ್ವೕರ್‌ನಲ್ಲಿ ಸಾವಿರಾರು ಮಂದಿ ಸೇರಿ ಯೋಗ ಮಾಡಿದರು. ಅದೇ ದಿನ ಚೀನಾದ ಉಕ್ಸಿ ನಗರದಲ್ಲಿ 10 ಸಾವಿರ ಮಂದಿ ಯೋಗ ದಿನದಲ್ಲಿ ಭಾಗವಹಿಸಿದ್ದರು. ಇನ್ನು ಅಥೆನ್ಸ್‌ನಲ್ಲಿ ಗ್ರೀಕ್‌ ಮುಕ್ತ ಯೋಗ ದಿನ ಆಚರಿಸಲಾಯಿತು.

2018: ಲಕ್ಷ ಮಂದಿಯಿಂದ ಯೋಗ ದಾಖಲೆ:-
2018ರಲ್ಲಿ ನಡೆದ ನಾಲ್ಕನೇ ಯೋಗ ದಿನಕ್ಕೆ ಶಾಂತಿಗಾಗಿ ಯೋಗ ಎಂದು ನಾಮಕರಣ ಆಡಲಾಗಿತ್ತು. ರಾಜಸ್ಥಾನದ ಕೋಟಾದಲ್ಲಿ ನಡೆದ ಕಾರ‍್ಯಕ್ರಮದಲ್ಲಿ 1 ಲಕ್ಷ ಮಂದಿ ಭಾಗವಹಿಸಿ ಯೋಗ ಅಭ್ಯಾಸ ಮಾಡಿದರು. ಇದು ಗಿನ್ನೆಸ್‌ ದಾಖಲೆ ಸೇರಿತು. ಆ ವರ್ಷ ಮೋದಿ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದ ಕಾರ‍್ಯಕ್ರಮದಲ್ಲಿ ಭಾಗವಹಿಸಿದ್ದರು.

2019ರಲ್ಲಿ ರಾಂಚಿಯಲ್ಲಿ ಯೋಗ:-
2019ರ ವಿಶ್ವ ಯೋಗ ದಿನದಂದು ಜಾರ್ಖಂಡ್‌ ರಾಜ್ಯದ ರಾಂಚಿಯಲ್ಲಿ ಕೇಂದ್ರ ಸರ್ಕಾರದ ಆಯುಷ್‌ ಇಲಾಖೆಯಿಂದ ಆಯೋಜಿಸಿದ್ದ ಬೃಹತ್‌ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಗವಹಿಸಿದ್ದರು. 30 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗಾಸನ ಮಾಡಿದ್ದರು. 5ನೇ ಅಂತರ ರಾಷ್ಟ್ರೀಯ ಯೋಗ ದಿನವನ್ನು ‘ಯೋಗ್ ಫಾರ್ ಹಾರ್ಟ್’ ಥೀಮ್ ನಲ್ಲಿ ಯೋಗ ದಿನಾಚರಣೆ ಆಚರಿಸಿದ್ದು ವಿಶೇಷವಾಗಿದ್ದಕ್ಕೆ ಕಾರಣ ನರೇಂದ್ರ ಮೋದಿ ಅವರು.

2020ರಲ್ಲಿ 6ನೇ ಅಂತರಾಷ್ಟ್ಪೀಯ ಯೋಗ ಮತ್ತು 2021ರಲ್ಲಿ 7ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಕೊರೊನಾ ವೈರಸ್‌ ಕಾರಣ ವರ್ಚುವಲ್‌ ವಿಧಾನದಲ್ಲಿ ಯೋಗದಿನಾಚರಣೆ ಕಾರ್ಯಕ್ರಮ ನಡೆದಿತ್ತು. ಮನೆಯಲ್ಲಿ ಯೋಗ ಮತ್ತು ಕುಟುಂಬದೊಂದಿಗೆ ಯೋಗ” ಎಂಬುದು 2020ರಲ್ಲಿನ ಸಂದೇಶ ಆಗಿತ್ತು. 2021ರ 7ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ‘ಆರೋಗ್ಯಕ್ಕಾಗಿ ಯೋಗ’ ಎನ್ನುವುದು ಸಂದೇಶವಾಗಿದ್ದು, ಯೋಗಾಭ್ಯಾಸವು ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕೇಂದ್ರೀಕರಿಸುತ್ತದೆ’ ಎಂದು ನರೇಂದ್ರ ಮೋದಿ ಜನರನ್ನು ಉದ್ದೇಶಿಸಿ ಮಾತನಾಡಿದ್ದರು.

8ನೇ ಅಂತರಾಷ್ಟ್ರೀಯ ಯೋಗ:
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಎಲ್ಲಿಯೂ ಯೋಗ ದಿನ ಆಚರಿಸಲು ಸಾಧ್ಯವಾಗಿರಲಿಲ್ಲ. 8ನೇ ಅಂತರಾಷ್ಟ್ರೀಯ ಯೋಗ ದಿನ ಆಚರಣೆಯು ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಆಚರಿಸುತ್ತಿರುವುದು ಕರುನಾಡಿನ ಕೀರ್ತಿ ಪತಾಕೆಯು ವಿಶ್ವದಲ್ಲೆಡೆ ಪಸರಿಸಲಿದೆ. ಡ್ರಾಯಿಂಗ್ ರೂಮ್ ನಿಂದ ಬೋರ್ಡ್ ರೂಮಿನವರೆಗೆ, ನಗರದ ಉದ್ಯಾವನಗಳಿಂದ ಹಿಡಿದು ಕ್ರೀಡಾ ಸಂಕೀರ್ಣದವರೆಗೆ ಇಂದು ಯೋಗ ಮಾಡಲಾಗುತ್ತಿದೆ. ಇಂದಿನ ಬದಲಾಗುತ್ತಿರುವ ಕಾಲದಲ್ಲಿ ನಾವು ಆರೋಗ್ಯದ ಮೇಲೆ ಗಮನ ಹರಿಸಬೇಕಿದೆ. ಈ ಶಕ್ತಿ ಸಿಗಲು ಯೋಗದಿಂದ ಮಾತ್ರ ಸಾಧ್ಯ ಎಂದು ಸಾರಿದ ನರೇಂದ್ರಮೋದಿ ಅವರ ಆದರ್ಶ ಇಡೀ ವಿಶ್ವಕ್ಕೆ ಮಾದರಿ.


Stay up to date on all the latest ವಿಶೇಷ news
Poll
RBI

ರೈತರಿಗೆ ಕೃಷಿ ಸಾಲ ನೀಡಲು CIBIL ಸ್ಕೋರ್ ಪರಿಗಣಿಸುವ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನೀತಿ ಸರಿಯೇ?


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp