ಕೋವಿಡ್ ನಿಂದ ಅನಾಥರಾದ 18 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆ
ಕೋವಿಡ್-19 ಸಾಂಕ್ರಾಮಿಕದಿಂದ 221 ವಿದ್ಯಾರ್ಥಿಗಳು ತಮ್ಮ ಪೋಷಕರು ಕಳೆದುಕೊಂಡಿದ್ದಾರೆ. ಆದಾಗ್ಯೂ, ತಮ್ಮ ವಿಶ್ವಾಸವನ್ನು ಕಳೆದುಕೊಂಡಿಲ್ಲ. ಈ ಪೈಕಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ 22 ವಿದ್ಯಾರ್ಥಿಗಳ ಪೈಕಿ 18 ಮಂದಿ ತೇರ್ಗಡೆ ಹೊಂದಿದ್ದಾರೆ.
Published: 23rd May 2022 08:50 PM | Last Updated: 24th May 2022 01:32 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕದಿಂದ 221 ವಿದ್ಯಾರ್ಥಿಗಳು ತಮ್ಮ ಪೋಷಕರು ಕಳೆದುಕೊಂಡಿದ್ದಾರೆ. ಆದಾಗ್ಯೂ, ತಮ್ಮ ವಿಶ್ವಾಸವನ್ನು ಕಳೆದುಕೊಂಡಿಲ್ಲ. ಈ ಪೈಕಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ 22 ವಿದ್ಯಾರ್ಥಿಗಳ ಪೈಕಿ 18 ಮಂದಿ ತೇರ್ಗಡೆ ಹೊಂದಿದ್ದಾರೆ. ಐವರು ಶೇ. 85ಕ್ಕಿಂತ ಹೆಚ್ಚಿನ ಅಂಕ ಗಳಿಸಿದ್ದಾರೆ. 10 ಮಂದಿ ಶೇ. 60ಕ್ಕಿಂತ ಹೆಚ್ಚಿನ ಅಂಕ ಗಳಿಸಿದ್ದಾರೆ ಎಂದು ಸಮಗ್ರ ಮಕ್ಕಳ ರಕ್ಷಣಾ ಯೋಜನಾ ನಿರ್ದೇಶಕಿ ಲತಾ ಕುಮಾರಿ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಹಾಸನ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಪಿಎಂ ಕೇರ್ಸ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವು ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಒಬ್ಬ ವಿದ್ಯಾರ್ಥಿ ಶೇ.92 ಫಲಿತಾಂಶ ಪಡೆದಿದ್ದರೆ ಮತ್ತೋರ್ವನಿಗೆ ಶೇ. 89 ರಷ್ಟು ಫಲಿತಾಂಶ ಬಂದಿದೆ. ಬೆಳಗಾವಿ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಶೇ.89, ಶೇ. 72 ಮತ್ತು ಶೇ. 71 ರಷ್ಟು ಅಂಕಗಳನ್ನು ಗಳಿಸಿದ್ದಾರೆ.
ಇದನ್ನೂ ಓದಿ: 10 ನೇ ತರಗತಿ ಪರೀಕ್ಷೆಯಲ್ಲಿ ಒಟ್ಟಿಗೆ ತೇರ್ಗಡೆಯಾದ ತಂದೆ-ಮಗ, ಮನೆಯಲ್ಲಿ ಸಂಭ್ರಮ!
ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಯೊಬ್ಬ ಶೇ. 88.96 ರಷ್ಟು ಫಲಿತಾಂಶ ಪಡೆದಿದ್ದರೆ ಚಿಕ್ಕಬಳ್ಳಾಪುರ ಜಿಲ್ಲೆಯ ಮತ್ತೋರ್ವ ವಿದ್ಯಾರ್ಥಿ ಶೇ. 88.64 ರಷ್ಟು ಅಂಕಗಳನ್ನು ಪಡೆದಿದ್ದಾನೆ. ಬಳ್ಳಾರಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವ ಶೇ. 83. 2 ರಷ್ಟು ಅಂಕ ಪಡೆದಿದ್ದರೆ ಮತ್ತೋರ್ವ ಶೇ. 69.9 ರಷ್ಟು ಅಂಕ ಗಳಿಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಯೊಬ್ಬ ಶೇ. 79 ರಷ್ಟು ಅಂಕಗಳಿಸಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಮತ್ತೋರ್ವ ವಿದ್ಯಾರ್ಥಿಯ ಸ್ಕೋರ್ ಶೇ. 78. 24 ಆಗಿದೆ.
ಬಾಗಲಕೋಟೆಯ ವಿದ್ಯಾರ್ಥಿಯೊಬ್ಬ ಶೇ. 75.68, ಬೀದರ್ ಜಿಲ್ಲೆಯ ವಿದ್ಯಾರ್ಥಿಯೊಬ್ಬ ಶೇ, 74.88, ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಯೊಬ್ಬ ಶೇ.51.2 ಮತ್ತು ಮೈಸೂರು ಜಿಲ್ಲೆಯ ವಿದ್ಯಾರ್ಥಿಯೊಬ್ಬರು ಶೇ. 50.88 ರಷ್ಟು ಅಂಕಗಳನ್ನು ಗಳಿಸಿದ್ದಾರೆ.
ಇದನ್ನೂ ಓದಿ: ಎಸ್ ಎಸ್ ಎಲ್ ಸಿ ಫಲಿತಾಂಶ: ಅಡ್ಡಿಯಾಗದ ಅಂಗವೈಕಲ್ಯ; ರಾಜ್ಯದ 3,762 ವಿದ್ಯಾರ್ಥಿಗಳ ಸಾಧನೆ!
ಬೆಂಗಳೂರು ನಗರ ಜಿಲ್ಲೆಯಲ್ಲಿ 30 ಮಕ್ಕಳ ಪೋಷಕರು ಕೋವಿಡ್ ನಿಂದ ಸಾವನ್ನಪ್ಪಿದ್ದರೆ ಬೆಳಗಾವಿ ಜಿಲ್ಲೆಯಲ್ಲಿ 22, ಚಿಕ್ಕಬಳ್ಳಾಪುರ 16, ಮೈಸೂರು ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 11, ಬೀದರ್, ಹಾಸನ, ರಾಮನಗರ ಮತ್ತು ತುಮಕೂರಿನಲ್ಲಿ ತಲಾ 8, ಬಾಗಲಕೋಟೆ ಮತ್ತು ಬಳ್ಳಾರಿಯಲ್ಲಿ ತಲಾ ಏಳು, ಚಿಕ್ಕಮಗಳೂರು, ಮಂಡ್ಯ ಮತ್ತು ಯಾದಗಿರಿಯಲ್ಲಿ ತಲಾ ಆರು, ಚಿತ್ರದುರ್ಗ, ಧಾರವಾಡ, ಗದಗ, ಕೋಲಾರ, ಶಿವಮೊಗ್ಗದಲ್ಲಿ ತಲಾ 5, ಬೆಂಗಳೂರು ಗ್ರಾಮಾಂತರ, ರಾಯಚೂರು ಮತ್ತು ಹಾವೇರಿಯಲ್ಲಿ ತಲಾ 4 ಮಂದಿ ವಿದ್ಯಾರ್ಥಿಗಳು ತಮ್ಮ ಫೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ.