ಕೇರಳ: ಇದು ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಗ್ರಾಮ ಪಂಚಾಯಿತಿ!

ಕೇರಳದ ತಿರುವನಂತಪುರಂ ಜಿಲ್ಲೆಯ ಪುಲ್ಲಂಪಾರಾ ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಮೊದಲ ಗ್ರಾಮ ಪಂಚಾಯಿತಿಯಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ಅಧಿಕೃತವಾಗಿ ಈ ವಿಷಯವನ್ನು ಪ್ರಕಟಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುವನಂತಪುರಂ: ಕೇರಳದ ತಿರುವನಂತಪುರಂ ಜಿಲ್ಲೆಯ ಪುಲ್ಲಂಪಾರಾ ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಮೊದಲ ಗ್ರಾಮ ಪಂಚಾಯಿತಿಯಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ಅಧಿಕೃತವಾಗಿ ಈ ವಿಷಯವನ್ನು ಪ್ರಕಟಿಸಿದ್ದಾರೆ. ಸರ್ಕಾರಿ ಸೇವೆಗಳನ್ನು ಪಡೆಯಲು ಸಾರ್ವಜನಿಕರಿಗೆ ಡಿಜಿಟಲ್ ಸಾಕ್ಷರತೆ ಪ್ರಮುಖವಾಗಿದೆ. ಜಾಗತಿಕ ಜ್ಞಾನದ ನೆಟ್ ವರ್ಕ್ ನೊಂದಿಗೆ ಸಂಪರ್ಕ ಕಲ್ಪಿಸಲಿದೆ ಎಂದು ಪಿಣರಾಯಿ ಹೇಳಿದ್ದಾರೆ. 

ಕೇರಳವನ್ನು ಜ್ಞಾನದ ಸೊಸೈಟಿಯನ್ನಾಗಿ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ಆದ್ದರಿಂದ ಜನರು ಜಗತ್ತಿನ ಯಾವುದೇ ಭಾಗದಿಂದ ಮಾಹಿತಿ ಪಡೆದು ಅದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಆನ್ ಲೈನ್ ನಲ್ಲಿ 800ಕ್ಕೂ ಇತರ ಸರ್ಕಾರಿ ಸೇವೆಗಳು  ದೊರೆಯುವಂತೆ ಸರ್ಕಾರ ಮಾಡಿದ್ದು, ಡಿಜಿಟಲ್ ಸಾಕ್ಷರತೆ ಜನರು ಇದನ್ನು ಬಹುತೇಕವಾಗಿ ಬಳಸಿಕೊಳ್ಳಬಹುದಾಗಿದೆ. ಸರ್ಕಾರ ವಿವಿಧ ಹಂತಗಳಲ್ಲಿ ಡಿಜಿಟಲ್ ಮತ್ತು ಆನ್ ಲೈನ್ ಪ್ಲಾಟ್ ಪಾರ್ಮ್ ಮೂಲಕ ಸಂಪರ್ಕ ಒದಗಿಸಲು ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದರು. 

ಸಾಮಾನ್ಯ ದರದಲ್ಲಿ ಜನರಿಗೆ ಇಂಟರ್ ನೆಟ್ ಸೇವೆಗಳನ್ನು ಒದಗಿಸಲಾಗುತ್ತಿದೆ. ಸಾರ್ವಜನಿಕರು ಇಂಟರ್ ನೆಟ್ ಮತ್ತಿತರ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಸಿದ್ಧರಾಗಬೇಕು ಎಂದು ಅವರು ಕರೆ ನೀಡಿದರು, ಪುಲ್ಲಂಪಾರಾ ಗ್ರಾಮ ಪಂಚಾಯಿತಿಯಲ್ಲಿನ ದುರ್ಬಲ ವರ್ಗದ ಜನರಿಗೆ ಡಿಜಿಟಲ್ ಶಿಕ್ಷಣ ಒದಗಿಸಲು 2021ರ ಆಗಸ್ಟ್ 15 ರಂದು ಡಿಜಿ ಪುಲ್ಲಂಪಾರಾ ಯೋಜನೆಯನ್ನು ಆರಂಭಿಸಲಾಗಿತ್ತು. ಐದು ಎಂಜಿನಿಯರಿಂಗ್ ಕಾಲೇಜುಗಳ ಸ್ವಯಂ ಸೇವಕರು ಮತ್ತಿತರ ಸ್ವಯಂ ಸಹಾಯ ಗುಂಪುಗಳ ಸಹಯೋಗದಲ್ಲಿ ಈ ಯೋಜನೆಯನ್ನು ನಡೆಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com