ಕ್ರೀಡೆ

ಸಾಯ್ ಮುಂದೆ ವಿಜೇಂದರ್ ರಜೆ ಅರ್ಜಿ

Published On :

ಪಾಟಿಯಾಲಾ: ಮಾದಕ ದ್ರವ್ಯ ಜಾಲದಲ್ಲಿ ಸಿಕ್ಕಿಹಾಕಿಕೊಂಡಿರುವ ಬಾಕ್ಸರ್ ವಿಜೇಂದರ್ ಸಿಂಗ್, ಅವರ ರಜೆ ಅರ್ಜಿಯು ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರ (ಸಾಯ್)ದ ಮುಂದೆ ಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾಯ್ ನಿರ್ಧಾರ ಕೈಗೊಳ್ಳಬೇಕಿದೆ.
ಹೆರಾಯಿನ್ ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿದ್ದ ವಿಜೇಂದರ್ ಸಿಂಗ್, ರಾಷ್ಟ್ರೀಯ ಕ್ರೀಡಾ ಸಂಸ್ಥೆ (ಎನ್‌ಐಎಸ್)ಗೆ ರಜೆ ಅರ್ಜಿ ಸಲ್ಲಿಸಿದ್ದರು. ಅವರಿಗೆ ರಜೆಯೂ ಮುಂಜೂರಾಗಿತ್ತು. ಆದರೆ, ಕಳೆದ ಗುರುವಾರ ಅವರಿಗೆ ನೀಡಲಾಗಿದ್ದ ರಜೆ ಅವಧಿ ಮುಕ್ತಾಯವಾಗಿದೆ. ಹಾಗಾಗಿ, ವಿಜೇಂದರ್ ಅವರು ತಮ್ಮ ರಜಾ ಅವಧಿಯನ್ನು ವಿಸ್ತರಿಸಲು ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಬಗ್ಗೆ ನಿರ್ಣಯ ಕೈಗೊಳ್ಳುವಲ್ಲಿ ಗೊಂದಲಕ್ಕೆ ಒಳಗಾಗಿರುವ ಎನ್‌ಐಎಸ್, ವಿಜೇಂದರ್ ಅವರ ಹೊಸ ಅರ್ಜಿಯನ್ನು ಸಾಯ್‌ಗೆ ಕಳುಹಿಸಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.