ಚಾಂಪಿಯನ್ಸ್ ಟ್ರೋಫಿಗೆ ಪ್ರಯರ್ ಅಲಭ್ಯ
ಲಂಡನ್: ಇಂಗ್ಲೆಂಡ್ನ ಭರವಸೆಯ ವಿಕೆಟ್ ಕೀಪರ್ ಮ್ಯಾಟ್ ಪ್ರಯರ್, ಜೂನ್ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಅಲಭ್ಯರಾಗಲಿದ್ದಾರೆ. ಪಂದ್ಯಾವಳಿಗಾಗಿ ಪ್ರಕಟಗೊಂಡಿರುವ 30 ಆಟಗಾರರ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿರುವ ಪ್ರಯರ್, ಈ ಪಂದ್ಯಾವಳಿಯಲ್ಲಿ ಆಡುವ ಅವಕಾಶದಿಂದ ಮತ್ತೆ ವಂಚಿತರಾಗಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರರಾಗಿರುವ ಪ್ರಯರ್, ಕಳೆದ ಮಾಸಾಂತ್ಯದ ವೇಳೆ ನಡೆದಿದ್ದ ಇಂಗ್ಲೆಂಡ್-ನ್ಯೂಜಿಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ವೀರೋಚಿತ ಆಟ ಪ್ರದರ್ಶಿಸಿದ್ದರು. ಅಂತಿಮ ಹಂತದ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿದಿದ್ದ ಅವರು, ಭರ್ಜರಿ ಶತಕ ಬಾರಿಸಿ, ಇಂಗ್ಲೆಂಡ್ ತಂಡವನ್ನು ಸೋಲಿನ ದವಡೆಯಿಂದ ಪಾರುಮಾಡಿದ್ದರು. ಆದರೆ, ಏಕದಿನ ಪಂದ್ಯಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಅವರು, 2011ರಿಂದೀಚೆಗೆ ಯಾವುದೇ ಸೀಮಿತ ಓವರ್ಗಳ ಪಂದ್ಯಗಳಲ್ಲಿ ಆಡಿಲ್ಲ.
ಸ್ಥಾನ ಪಡೆದ ಇತರರು: ಸಂಭಾವ್ಯರ ಪಟ್ಟಿಯಲ್ಲಿ ನಾಲ್ವರು ಹೊಸಬರಿಗೆ (ಗ್ಯಾರಿ ಬ್ಯಾಲನ್ಸ್, ವರುಣ್ ಚೋಪ್ರಾ, ಜೇಮ್ಸ್ ಹ್ಯಾರಿಸ್ ಹಾಗೂ ಕ್ರಿಸ್ ರೈಟ್) ಅವಕಾಶ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

