ಕ್ರೀಡೆ

ಜಹೀರ್, ಭಜ್ಜಿ, ವೀರೂ ಔಟ್

Published On :

ನವದೆಹಲಿ: ಈ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸಂಭಾವ್ಯ ರ ಪಟ್ಟಿಯಲ್ಲಿ ಕರ್ನಾಟಕದ ವೇಗದ ಬೌಲರ್ ಆರ್. ವಿನಯ್ ಕುಮಾರ್ ಸ್ಥಾನ ಪಡೆದಿದ್ದಾರೆ. ಇನ್ನು ಹಿರಿಯ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್ ಮತ್ತು ಹರ್ಭಜನ್ ಸಿಂಗ್ ಅವರನ್ನು ಸಂಭಾವ್ಯರ ಪಟ್ಟಿಯಿಂದ ಕೈಬಿಡಲಾಗಿದೆ. ಆದರೆ, ಜಮ್ಮು ಮತ್ತು ಕಾಶ್ಮೀರದ ಆಲ್ರೌಂಡರ್ ಪರ್ವೇಜ್ ರಸೂಲ್ ಇದೇ ಮೊದಲ ಬಾರಿಗೆ ಸಂಭಾವ್ಯ ರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಸೆಹ್ವಾಗ್ ಮತ್ತು ಹರ್ಭಜನ್ ಅವರೊಂದಿಗೆ ವೇಗಿ ಜಹೀರ್ ಖಾನ್, ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಹಾಗೂ ಸ್ಪಿನ್ನರ್ ಪ್ರಗ್ಯಾನ್ ಓಜಾ ಅವರನ್ನು ಸಹ ಸಂಭಾವ್ಯ ರ ಪಟ್ಟಿಯಿಂದ ಕೈಬಿಡಲಾಗಿದೆ. ಈ ಆಟಗಾರರನ್ನು ಕೈಬಿಟ್ಟ ಪಟ್ಟಿಯನ್ನು ಬಿಸಿಸಿಐ ಕಾರ್ಯದರ್ಶಿ ಸಂಜಯ್ ಜಗದಾಳೆ ಶನಿವಾರ ಪ್ರಕಟಿಸಿದರು. ಟೆಸ್ಟ್ ತಂಡದಿಂದ ಕೈಬಿಡಲಾಗಿದ್ದ ಆರಂಭಿಕ ದಾಂಡಿಗ ಗೌತಮ್ ಗಂಭೀರ್ ಸಂಭಾವ್ಯ ರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಮಧ್ಯ ಪ್ರದೇಶದ ಆಲ್ರೌಂಡರ್ ಜಲಜ ಸಕ್ಸೇನಾ, ಪಂಜಾಬ್ ವೇಗಿ ಸಿದ್ದಾರ್ಥ್ ಕೌಲ್, ಮಹಾರಾಷ್ಟ್ರದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಕೇದಾರ ಜಾಧವ್ ಹಾಗೂ ಮಧ್ಯಪ್ರದೇಶದ ವೇಗಿ ಈಶ್ವರ ಯಾದವ್ ಸೇರಿದಂತೆ ಹಲವು ಯುವ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಸಂಭಾವ್ಯರ ಪಟ್ಟಿ
ಮುರಳಿ ವಿಜಯ್, ಶಿಖರ್ ಧವನ್, ಗೌತಮ್ ಗಂಭೀರ್, ಉನ್ಮುಕ್ತ್ ಚಾಂದ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಸುರೇಶ್ ರೈನಾ, ರೋಹಿತ್ ಶರ್ಮಾ, ಮನೋಜ್ ತಿವಾರಿ, ಅಜಿಂಕ್ಯ ರಹಾನೆ, ಅಂಬಾಟಿ ರಾಯುಡು, ಕೇದಾರ್ ಜಾಧವ್, ಮಹೇಂದ್ರ ಸಿಂಗ್ ಧೋನಿ, ವೃದ್ಧಿಮಾನ್ ಶಾ, ದಿನೇಶ್ ಕಾರ್ತಿಕ್, ರವಿಚಂದ್ರನ್ ಅಶ್ವಿನ್, ಅಮಿತ್ ಮಿಶ್ರಾ, ರವಿಂದ್ರ ಜಡೇಜಾ, ಜಲಜ ಸಕ್ಸೇನಾ, ಪರ್ವೇಜ್ ರಸೂಲ್, ಇಶಾಂತ್ ಶರ್ಮಾ, ಭುವನೇಶ್ವರ ಕುಮಾರ್, ಅಶೋಕ್ ದಿಂಡಾ, ಉಮೇಶ್ ಯಾದವ್, ಮೊಹ್ಮದ್ ಶಮಿ, ಇರ್ಫಾನ್ ಪಠಾಣ್, ಆರ್. ವಿನಯ್ ಕುಮಾರ್, ಪ್ರವೀಣ್ ಕುಮಾರ್, ಈಶ್ವರ ಪಾಂಡೆ, ಸಿದ್ದಾರ್ಥ್ ಕೌಲ್.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.