ಕ್ರೀಡೆ

ಪಂದ್ಯ ಶುಲ್ಕ ಹೆಚ್ಚಳಕ್ಕೆ ನಿರ್ಧಾರ

Published On :

ಕರಾಚಿ: ಟೆಸ್ಟ್ ಪಂದ್ಯಗಳಲ್ಲಿ ಆಡಲಿರುವ ತನ್ನ ಕ್ರಿಕೆಟಿಗರಿಗೆ ನೀಡಲಾಗುವ ಶುಲ್ಕದಲ್ಲಿ ಹೆಚ್ಚಳ ಮಾಡಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಿರ್ಧರಿಸಿದೆ. ಕ್ರಿಕೆಟಿಗರು ಏಕದಿನ ಹಾಗೂ ಟಿ20 ಪಂದ್ಯಗಳ ಕಡೆಗೇ ಹೆಚ್ಚು ಒಲವು ತೋರುತ್ತಿರುವ ಹಿನ್ನೆಲೆಯಲ್ಲಿ, ಟೆಸ್ಟ್ ಪಂದ್ಯಗಳ ಕಡೆಗೆ ಅವರ ಗಮನವನ್ನು ಹೆಚ್ಚಾಗಿ ಸೆಳೆಯಲು ಪಿಸಿಬಿ ಈ ಕ್ರಮವನ್ನು ಕೈಗೊಂಡಿದೆ. ಇತ್ತೀಚೆಗೆ, ಪಾಕಿಸ್ತಾನ ತಂಡ, ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಟೆಸ್ಟ್ ಸರಣಿಯಲ್ಲಿ ಆಡಲು ಕೆಲ ಪಾಕಿಸ್ತಾನದ ಕ್ರಿಕೆಟಿಗರು ಅನಾಸಕ್ತಿ ತೋರಿದ್ದರೆಂದು ತಂಡದ ವ್ಯವಸ್ಥಾಪಕ ಮಂಡಳಿ, ಪಿಸಿಬಿಗೆ ವರದಿ ಸಲ್ಲಿಸಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡ ಪಿಸಿಬಿ ಅಧಿಕಾರಿಗಳು ಈ ನಿಟ್ಟಿನಲ್ಲಿ ಸಭೆ ನಡೆಸಿ, ಟೆಸ್ಟ್ ಪಂದ್ಯಗಳಿಗೆ ನೀಡಬಹುದಾದ ಸಂಭಾವನೆಯನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.