ಶ್ರೀಶಾಂತ್‌ಗೆ ಬಿಸಿಸಿಐ ಎಚ್ಚರಿಕೆ
ನವದೆಹಲಿ: ಐದು ವರ್ಷಗಳ ಹಿಂದೆ 2008ರಲ್ಲಿ ನಡೆದ 'ಕಪಾಳಮೋಕ್ಷ' ಪ್ರಕರಣದ ಕುರಿತು ಸಾಮಾಜಿಕ ತಾಣ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ ವೇಗದ ಬೌಲರ್ ಎಸ್. ಶ್ರೀಶಾಂತ್ ಅವರಿಗೆ ಬಿಸಿಸಿಐ ಭಾನುವಾರ ಎಚ್ಚರಿಕೆ ನೀಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರಿತನಿಧಿಸಿರುವ ವೇಗಿ ಶ್ರೀಶಾಂತ್ ಇನ್ನೊಂದು ಬಾರಿ ಈ ರೀತಿ ಟ್ವೀಟ್ ಮಾಡಿದರೆ, ಅವರಿಗೆ ಶೋ ಕಾಸ್ ನೋಟಿಸ್ ಜಾರಿ ಮಾಡಲಾಗುವುದು ಎಂದು ಐಪಿಎಲ್ ಮೂಲಗಳು ತಿಳಿಸಿವೆ. ಹರ್ಭಜನ್ ಸಿಂಗ್ ಬೆನ್ನಿಗೆ ಚೂರಿ ಹಾಕುವ ವ್ಯಕ್ತಿ. ಅಲ್ಲದೆ, ಆತ ನನ್ನ ಕಪಾಳಕ್ಕೆ ಹೊಡೆದಿರಲಿಲ್ಲ. ಬದಲಾಗಿ ಬೆನ್ನಿಗೆ ಗುದ್ದಿದ್ದ ಎಂದು ಪ್ರಕರಣದ ಕುರಿತು ಶ್ರೀಶಾಂತ್ ಟ್ವೀಟರ್‌ನಲ್ಲಿ ಬಹಿರಂಗಪಡಿಸಿದ್ದರು. ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಮಾತಿನ ಚಕಮಕಿ ನಡೆಸಿದ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಇಬ್ಬರಿಗೂ ಬಿಸಿಸಿಐ ಎಚ್ಚರಿಕೆ ನೀಡಿದೆ. ಪಂದ್ಯ ರೆಫ್ರಿ ಸಹ ಈ ಇಬ್ಬರು ಆಟಗಾರರಿಗೆ ಛೀಮಾರಿ ಹಾಕಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

