ನವಜೋತ್ಗೆ ಬೆಳ್ಳಿ
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಏಷ್ಯಾ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಭಾರತ ಕುಸ್ತಿಪಟುಗಳು ಭಾನುವಾರ ಒಂದು ಬೆಳ್ಳಿ ಮತ್ತು ಮೂರು ಕಂಚು ಸೇರಿದಂತೆ ಒಟ್ಟು ನಾಲ್ಕು ಪದಕಗಳನ್ನು ಗೆದ್ದುಕೊಂಡಿದ್ದಾರೆ.
ಮಹಿಳೆಯರ ವಿಭಾಗದಲ್ಲಿ ನವಜೋತ್ ಕೌರ್ 67ಕೆ.ಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಮಂಗೋಲಿಯಾದ ಓಚಿರ್ಬ್ಯಾಟ್ ವಿರುದ್ಧ ಸೋಲನುಭವಿಸುವ ಮೂಲಕ ಬೆಳ್ಳಿ ಪದಕ ಗೆದ್ದುಕೊಂಡರು.
63ಕೆ.ಜಿ ವಿಭಾಗದಲ್ಲಿ ಗೀತಿಕಾ ಜಾಖರ್ ಮತ್ತು 72ಕೆ.ಜಿ ವಿಭಾಗದಲ್ಲಿ ಜ್ಯೋತಿ ಕಂಚಿನ ಪದಕ ಗೆದ್ದುಕೊಂಡರು. ಇನ್ನು ಪುರುಷರ 120ಕೆ.ಜಿ ವಿಭಾಗದಲ್ಲಿ ಹೀತೇಂದರ್ ಕಂಚಿನ ಪದಕ ಗೆದ್ದುಕೊಂಡರು. ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದ ನವಜೋತ್ ಕೌರ್ ಚಿನ್ನ ಗೆಲ್ಲುವ ಯತ್ನ ನಡೆಸಿದ್ದರು. ಆದರೆ, ಬಲಿಷ್ಠ ಪ್ರದರ್ಶನ ನೀಡಿದ ಮಂಗೋಲಿಯಾದ ಆಟಗಾರ್ತಿ ಸ್ಥಳೀಯ ಕೌರ್ಗೆ ನಿರಾಸೆ ಮೂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

