ಕ್ರೀಡೆ

ಉತ್ತಮ ಪ್ರದರ್ಶನಕ್ಕೆ ಪ್ರಯತ್ನ: ರಾಹುಲ್

Published On :

ಬೆಂಗಳೂರು:  ಜೈಪುರ ಪಿಚ್ ಹೊರತುಪಡಿಸಿ, ಇತರ ಪಿಚ್‌ಗಳಲ್ಲೂ ಉತ್ತಮ ಪ್ರದರ್ಶನ ನೀಡುವ ನಿಟ್ಟಿನಲ್ಲಿ ತಂಡದ ಸಾಮರ್ಥ್ಯವನ್ನು ಹೆಚ್ಚಿಸಬೇಕಿದೆ ಎಂದು ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.
ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ರಾಜಸ್ಥಾನ ತಂಡ 7 ವಿಕೆಟ್‌ಗಳ ಸೋಲು ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ತನ್ನ ತವರು ಪಿಚ್‌ನಲ್ಲಿ ರಾಜಸ್ಥಾನ ಉತ್ತಮ ಪ್ರದರ್ಶನ ತೋರುತ್ತಿದೆ. ಆದರೆ, ಇತರೆಡೆ ಹಿನ್ನೆಡೆ ಅನುಭವಿಸುತ್ತಿದೆ. ಆದ್ದರಿಂದ, ಹೊರ ಪಿಚ್‌ಗಳಲ್ಲೂ ಗೆಲವು ಸಾಧಿಸುವ ನಿಟ್ಟಿನಲ್ಲಿ ತಂಡದ ಸಾಮರ್ಥ್ಯವನ್ನು ಹೆಚ್ಚಿಸಬೇಕಿದೆ ಎಂದರು.

'ಪರ್ಪಲ್ ಕ್ಯಾಪ್ ಸ್ಫೂರ್ತಿ ನೀಡಿದೆ'
ಬೆಂಗಳೂರು:
ಪರ್ಪಲ್ ಕ್ಯಾಪ್ ದೊರಕಿರುವುದು ನನ್ನಲ್ಲಿ ಸ್ಫೂರ್ತಿಯನ್ನು ತುಂಬಿದೆ. ಅಲ್ಲದೆ ವಿಕೆಟ್ ಪಡೆಯುವ ಹಸಿವನ್ನು ಹೆಚ್ಚಿಸಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಆರ್. ವಿನಯ್ ಕುಮಾರ್ ಹೇಳಿದ್ದಾರೆ.
ಐಪಿಎಲ್‌ನ 6ನೇ ಆವೃತ್ತಿಯಲ್ಲಿ ಪ್ರಸ್ತುತ ಅತಿ ಹೆಚ್ಚು (12 ವಿಕೆಟ್) ಪಡೆದಿರುವ ಆರ್. ವಿನಯ್ ಕುಮಾರ್ ಪರ್ಪಲ್ ಕ್ಯಾಪ್ ಪಡೆದಿದ್ದರು.
'ಇದುವರೆಗೂ ನಾನು ನೀಡಿರುವ ಪ್ರದರ್ಶನ ನನಗೆ ತೃಪ್ತಿ ತಂದಿದೆ. ಮುಂದಿನ ಪಂದ್ಯಗಳಲ್ಲೂ ಇದೇ ರೀತಿ ಪ್ರದರ್ಶನ ಮುಂದುವರಿಸುವ ಭರವಸೆ ಇದೆ. ನನ್ನ ಶ್ರೇಷ್ಠ ಪ್ರದರ್ಶನ ತೋರಲು ಮತ್ತು ತಂಡಕ್ಕಾಗಿ ಹೆಚ್ಚಿನ ವಿಕೆಟ್ ಪಡೆಯಲು ಯತ್ನಿಸುತ್ತೇನೆ' ಎಂದಿದ್ದಾರೆ ವಿನಯ್ ಕುಮಾರ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.