ಕ್ರೀಡೆ

ಹಾಕಿ: ಕ್ವಾರ್ಟರ್‌ಗೆ ಕರ್ನಾಟಕ

Published On :

ಲಖ್ನೌ: ಚೈತ್ರ ಕೆ.ಸಿ ಅವರು ನೀಡಿದ ಉತ್ತಮ ಪ್ರದರ್ಶನದ ನೆರವಿನೊಂದಿಗೆ ಕರ್ನಾಟಕ ಮಹಿಳಾ ಹಾಕಿ ತಂಡ ಇಲ್ಲಿ ನಡೆಯುತ್ತಿರುವ ಮೂರನೇ ಹಾಕಿ ಇಂಡಿಯಾ ರಾಷ್ಟ್ರೀಯ ಮಹಿಳಾ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಒಡಿಶಾ ತಂಡದ ವಿರುದ್ಧ ಜಯ ಸಾಧಿಸಿದೆ.
ಇಲ್ಲಿನ ಮೇಜರ್ ಧ್ಯಾನ್‌ಚಂದ್ ಕ್ರೀಡಾಂಗಣದಲ್ಲಿ ನಡೆದ ಜಿ ಗುಂಪಿನ ಪಂದ್ಯದಲ್ಲಿ ಒಡಿಶಾ ವಿರುದ್ಧ 2-1 ಗೋಲುಗಳ ಅಂತರದ ಜಯ ಸಾಧಿಸಿದ ಕರ್ನಾಟಕ ತಂಡ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ಸ್ ಹಂತಕ್ಕೆ ಲಗ್ಗೆ ಇಟ್ಟಿದೆ.  ಕರ್ನಾಟಕದ ಪರ ಉತ್ತಮ ಪ್ರದರ್ಶನ ನೀಡಿದ ಚೈತ್ರ 12 ಹಾಗೂ 22ನೇ ನಿಮಿಷದಲ್ಲಿ ಗೋಲು ಗಳಿಸಿ ತಂಡಕ್ಕೆ ಮುನ್ನಡೆ ತಂದು ಕೊಟ್ಟರು. ನಂತರ 26ನೇ ನಿಮಿಷದಲ್ಲಿ ಒಡಿಶಾ ತಂಡದ ಪರ ರೈನಾ ಯಾಧವ್ ಗೋಲು ಗಳಿಸಿ ಸೋಲಿನ ಅಂತರವನ್ನು ಕಡಿಮೆ ಮಾಡಿದರು. ಸೋಮವಾರ ನಡೆದ ಉಳಿದ ಪಂದ್ಯಗಳಲ್ಲಿ ಮುಂಬೈ ತಂಡವು ರಾಜಸ್ಥಾನ್ ತಂಡವನ್ನು 12-1 ಗೋಲುಗಳ ಬೃಹತ್ ಜಯ ಸಾಧಿಸಿದೆ.
ಬಿ ಗುಂಪಿನ ಪಂದ್ಯದಲ್ಲಿ ಬಂಗಾಳ ತಂಡದ ವಿರುದ್ಧ ಹರ್ಯಾಣ ತಂಡ ವಾಕ್‌ಓವರ್ ಪಡೆದು ಮುಂದಿನ ಹಂತಕ್ಕೆ ತಲುಪಿತು.
ಎಫ್ ಗುಂಪಿನ ಪಂದ್ಯದಲ್ಲಿ ಬೋಪಾಲ್ ತಂಡವು ರೈಲ್ವೇಸ್ ತಂಡದ ವಿರುದ್ಧ 19-0 ಭಾರಿ ಅಂತರದ ಜಯ ಸಾಧಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.