ಕ್ರೀಡೆ

ಗಾಯಗೊಂಡು ತವರಿಗೆ ಮರಳಿದ ಮರ್ಲಾನ್ ಸ್ಯಾಮ್ಯೂಯಲ್ಸ್

Published On :

ಪುಣೆ: ಪುಣೆ ವಾರಿಯರ್ಸ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾದ ಮರ್ಲಾನ್ ಸ್ಯಾಮ್ಯೂಯಲ್ಸ್ ತೊಡೆ ಸಂದುವಿನ ಗಾಯದ ಸಮಸ್ಯೆಗೆ ಒಳಗಾಗಿದ್ದು, ಈ ಹಿನ್ನಲೆಯಲ್ಲಿ ಅವರು ತಮ್ಮ ತವರಿಗೆ ಮರಳಿದ್ದಾರೆ.
ಕಳೆದ ವರ್ಷದ ಟಿ20 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಸ್ಯಾಮ್ಯೂಯಲ್ಸ್, ಪುಣೆ ತಂಡದ ಪ್ರಮುಖ ವಿದೇಶಿ ಆಟಗಾರರಲ್ಲಿ ಒಬ್ಬರಾಗಿದ್ದರು. ಅಲ್ಲದೆ ಈ ಆವೃತ್ತಿಯಲ್ಲಿ 2 ಪಂದ್ಯಗಳನ್ನಾಡಿದ್ದು, 8 ರನ್ ಹಾಗೂ 1 ವಿಕೆಟ್ ಪಡೆದಿದ್ದಾರೆ.
ಸ್ಯಾಮ್ಯೂಯಲ್ಸ್ ಗುಣಮುಖರಾಗಲು ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ. ಇದರೆ ಜತೆಗೆ ತಾಯಿ ಕೂಡ ಕಾಯಿಲೆಯಿಂದ ಬಳಲುತಿದ್ದು, ಈ ಹಿನ್ನಲೆಯಲ್ಲಿ ತವರಿಗೆ ಮರಳಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿವೆ.
ಒಂದು ವೇಳೆ ಪುಣೆ ತಂಡ ನಾಕೌಟ್ ಹಂತಕ್ಕೆ ಪ್ರವೇಶ ಪಡೆದರೆ ಸ್ಯಾಮ್ಯೂಯಲ್ಸ್ ಮತ್ತೆ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ರೆಯಾನ್ ಹ್ಯಾರೀಸ್‌ಗೆ ಗಾಯ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬೌಲರ್ ಆಸ್ಟ್ರೇಲಿಯಾದ ರೆಯಾನ್ ಹ್ಯರೀಸ್ ಗಾಯಗೊಂಡು ತವರಿಗೆ ಮರಳಿದ್ದಾರೆ.
ರೆಯಾನ್ ಕಾಲಿನ ಹಿಮ್ಮಡಿ ನೋವಿನಿಂದ ಬಳಲುತ್ತಿದ್ದಾರೆ. ರೆಯಾನ್ ಅವರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸಿದ್ದ ಇಬ್ಬರು ವಿದೇಶಿ ಆಟಗಾರರು ತವರಿಗೆ ಮರಳಿದಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.