ಕ್ರೀಡೆ

ಮೇ 4ಕ್ಕೆ ಭಾರತ ತಂಡ ಪ್ರಕಟ

Published On :

ಮುಂಬೈ: ಇಂಗ್ಲೆಂಡ್ ಹಾಗೂ ವೇಲ್ಸ್‌ನಲ್ಲಿ ಇದೇ ವರ್ಷ ಜೂನ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗಾಗಿ ತೆರಳಲಿರುವ ಭಾರತ ತಂಡವನ್ನು ಮೇ. 4ರಂದು ಪ್ರಕಟಿಸಲಾಗುವುದೆಂದು ಬಿಸಿಸಿಐ ತಿಳಿಸಿದೆ. ಬಿಸಿಸಿಐ ಆಯ್ಕೆದಾರರು ಅಂದು ಸಭೆ ಸೇರಿ, ಚರ್ಚಿಸಿ ಪಂದ್ಯಾವಳಿಗೆ ತೆರಳಲಿರುವ ಅಂತಿಮಪಟ್ಟಿಯನ್ನು ಪ್ರಕಟಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದೆ. ಜೂ. 6ರಿಂದ 23ರವರೆಗೆ ನಡೆಯಲಿರುವ ಪಂದ್ಯಾವಳಿ ನಡೆಯಲಿದೆ.
ಚಾಂಪಿಯನ್ಸ್ ಟ್ರೋಫಿಗಾಗಿ ಈಗಾಗಲೇ 30 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮೇ. 4ರಂದು ನಡೆಯಲಿರುವ ಆಯ್ಕೆ ಮಂಡಳಿ ಅಧ್ಯಕ್ಷ ಸಂದೀಪ್ ಪಾಟೀಲ್ ನೇತೃತ್ವದ ಆಯ್ಕೆದಾರರ ಸಭೆಯಲ್ಲಿ ಅಂತಿಮ 15 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ.
ಏ. 6ರಂದು ಆಯ್ಕೆ ಮಾಡಲಾಗಿದ್ದ 30 ಸಂಭಾವ್ಯರ ಪಟ್ಟಿಯಲ್ಲಿ ಟೀಂ ಇಂಡಿಯಾದ ಹಿರಿಯ ಆಟಗಾರರಾದ ವೀರೇಂದ್ರ ಸೆಹ್ವಾಗ್ ಹಾಗೂ ಹರ್ಭಜನ್‌ಸಿಂಗ್ ಅವರಿಗೆ ಕೊಕ್ ನೀಡಲಾಗಿತ್ತು. ಆದರೆ, ಮೇ. 4ರಂದು ನಡೆಯುವ ಸಭೆಯಲ್ಲಿ ಸಂಭಾವ್ಯ ಪಟ್ಟಿಯಿಂದ ಹೊರಗಿಡಲಾಗಿದ್ದ ಆಟಗಾರರಿಗೂ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ಐಸಿಸಿ ಮೂಲಗಳು ಹೇಳಿವೆ.

ಮೊದಲ ಪಂದ್ಯ: ಜೂ. 6ರಂದೇ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ  ಸೆಣೆಸಲಿವೆ.
ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ತಂಡಗಳ ಪಟ್ಟಿಯಲ್ಲಿ ಭಾರತ 'ಬಿ'ಗುಂಪಿನಲ್ಲಿದೆ.
ಭಾರತದ ಸಂಭಾವ್ಯರ ಪಟ್ಟಿ: ಮುರಳಿ ವಿಜಯ್, ಶಿಖರ್ ಧವನ್, ಗೌತಮ್ ಗಂಬೀರ್, ಉನ್ಮುಕ್ತ್ ಚಾಂದ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಸುರೇಶ್ ರೈನಾ, ರೋಹಿತ್ ಶರ್ಮಾ, ಮನೋಜ್ ತಿವಾರಿ, ಅಜಿಂಕ್ಯ ರಹಾನೆ, ಆಂಬಟಿ ರಾಯುಡು, ಕೇದಾರ್ ಜಾಧವ್, ಮಹೇಂದ್ರ ಸಿಂಗ್ ಧೋನಿ, ವೃದ್ಧಿಮಾನ್ ಸಾಹಾ, ದಿನೇಶ್ ಕಾರ್ತಿಕ್, ಆರ್. ಅಶ್ವಿನ್, ಅಮಿತ್ ಮಿಶ್ರಾ, ರವಿಚಂದ್ರನ್ ಜಡೇಜಾ, ಜಲಜ್ ಸೆಕ್ಸೇನಾ, ಪರ್ವೇಜ್ ರಸೂಲ್, ಇಶಾಂತ್ ಶರ್ಮಾ, ಭುವನೇಶ್ವರ್ ಕುಮಾರ್, ಅಶೋಕ್ ದಿಂಡಾ, ಉಮೇಶ್ ಯಾದವ್, ಮಹಮ್ಮದ್ ಶಮಿ, ಇರ್ಫಾನ್ ಪಠಾಣ್, ವಿನಯ್ ಕುಮಾರ್, ಪ್ರವೀಣ್ ಕುಮಾರ್, ಐ.ಸಿ. ಪಾಂಡೆ ಹಾಗೂ ಸಿದ್ಧಾರ್ಥ್ ಕೌಲ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.