ಕ್ರೀಡೆ

ಮಂಕಾದ ಮುಂಬೈ ಇಂಡಿಯನ್ಸ್

Published On :

ಮುಂಬೈ: ಅಂಕಪಟ್ಟಿಯಲ್ಲಿ ಉನ್ನತ ಸ್ಥಾನಕ್ಕೇರಲು ಹವಣಿಸುತ್ತಿರುವ ಮುಂಬೈ ತಂಡವು ಸೋಮವಾರ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 175 ರನ್‌ಗಳ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಲು ನಿರ್ಧರಿಸಿದ ಮುಂಬೈ ತಂಡ ನಿಧಾನಗತಿಯ ಆರಂಭ ಪಡೆಯಿತು. ತಂಡದ ಮೊತ್ತ ಕೇವಲ 11 ರನ್ ಆಗಿದ್ದಾಗ 9 ರನ್‌ಗಳಿಸಿದ್ದ ಸಚಿನ್ ಪ್ರವೀಣ್ ಕುಮಾರ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗುವ ಮೂಲಕ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ನಂತರ 19 ಎಸೆತಗಳಲ್ಲಿ 25 ರನ್‌ಗಳಿಸಿ ಉತ್ತಮವಾಗಿ ಆಡುತ್ತಿದ್ದ ದಿನೇಶ್ ಕಾರ್ತಿಕ್, ಗೋನಿ ಎಸೆತದಲ್ಲಿ ಬೌಲ್ಡ್ ಆದರು. ನಂತರ 32 ಎಸೆತದಲ್ಲಿ 33 ರನ್‌ಗಳಿಸಿ ಉತ್ತಮ ಆರಂಭ ಪಡೆದಿದ್ದ ಡ್ವೇನ್ ಸ್ಮಿತ್, ಚಾವ್ಲಾ ಎಸೆತದಲ್ಲಿ ಮಿಲ್ಲರ್‌ಗೆ ಕ್ಯಾಚ್ ನೀಡಿದರು.
ನಂತರ ಜತೆಯಾದ ನಾಯಕ ರೋಹಿತ್ ಶರ್ಮಾ(79) ಹಾಗೂ ಪೊಲಾರ್ಡ್(20) ತಂಡಕ್ಕೆ 88 ರನ್‌ಗಳ ಉತ್ತಮ ಜತೆಯಾಟ ನೀಡಿದರು. ಅಂತಿಮ ಓವರ್‌ಗಳಲ್ಲಿ ಬಿರುಸಿನ ಆಟ ಪ್ರದರ್ಶಿಸಿದ ಈ ಜೋಡಿ ತಂಡದ ಮೊತ್ತ 174 ರನ್ ತಲುಪಲು ನೆರವಾದರು.
ಸಂಕ್ಷಿಪ್ತ ಸ್ಕೋರ್
ರೋಹಿತ್ ಅಜೇಯ 79 (39)
ಡ್ವೇನ್ ಸ್ಮಿತ್ 33 (32)
ಬೌಲಿಂಗ್: ಪ್ರವೀಣ್ 24/1, ಚಾವ್ಲಾ 24/1

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.