ಖೇಲ್ ರತ್ನಕ್ಕೆ ಗಿರೀಶ್ ಹೆಸರು
ನವದೆಹಲಿ: ಲಂಡನ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಕರ್ನಾಟಕದ ಅಥ್ಲೀಟ್ ಎಚ್.ಎನ್ ಗಿರೀಶ್ ಅವರ ಹೆಸರನ್ನು ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕದ ಗಿರೀಶ್ ಲಂಡನ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಹೈ ಜಂಪ್ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಈ ಮೊದಲು ಗಿರೀಶ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಖೇಲ್ ರತ್ನ ಪ್ರಶಸ್ತಿಗೆ ಪ್ಯಾರಾಲಿಂಪಿಕ್ಸ್ ಅಥ್ಲೀಟ್ ಎಚ್.ಎನ್ ಗಿರೀಶ್ ಮತ್ತು ಹಾಕಿ ಆಟಗಾರ ಸಂದೀಪ್ ಸಿಂಗ್ ಅವರ ಹೆಸರುಗಳನ್ನು ಸ್ವೀಕರಿಸಿತ್ತು. ಈ ಬಾರಿ, ಅರ್ಜುನ ಪ್ರಶಸ್ತಿಗೆ ರಾಷ್ಟ್ರೀಯ ಫೆಡರೇಷನ್ಗಳು 50ರಿಂದ 60 ಕ್ರೀಡಾಪಟುಗಳ ಹೆಸರುಗಳು ಹಾಗೂ ದ್ರೋಣಾಚಾರ್ಯ ಪ್ರಶಸ್ತಿಗೆ 30ರಿಂದ 40 ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ.
ಕೊಹ್ಲಿ, ಗವಾಸ್ಕರ್ ಹೆಸರು: ಬಿಸಿಸಿಐ ಸಂಸ್ಥೆ ಅರ್ಜುನ್ ಪ್ರಶಸ್ತಿಗೆ ಯುವ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗೆ ಸುನಿಲ್ ಗವಾಸ್ಕರ್ ಹೆಸರನ್ನು ನಾಮನಿರ್ದೇಶನ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

