ಪರ್ತ್: ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಭಾರತದ ವಿರುದ್ಧ ಟೆಸ್ಟ್ ಪ್ರವಾಸದಲ್ಲಿ ಸ್ಪಿನ್ನರ್‌ಗಳನ್ನು ಕಟ್ಟಿ ಹಾಕಲುಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರಂತೆ. ಅಲ್ಲದೆ ಭಾರತದ ಪಿಚ್‌ಗಳಿಗೆ ಹೊಂದಿಕೊಂಡು ಆಡಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿರುವುದಾಗಿ ಮ್ಯಾಕ್ಸ್‌ವೆಲ್ ಹೇಳಿಕೊಂಡಿದ್ದಾರೆ.
ಆಸ್ಟ್ರೇಲಿಯಾದ 17 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿರುವ ಆಲ್ರೌಂಡರ್ ಮ್ಯಾಕ್ಸ್‌ವೆಲ್, ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪದಾರ್ಪಣೆ ಮಾಡಲು ಸಿದ್ಧವಾಗಿದ್ದಾರೆ.
'ಭಾರತದಲ್ಲಿ ಸ್ಪಿನ್ನರ್‌ಗಳ ವಿರುದ್ಧ ಯಾವ ರೀತಿ ಪ್ರದರ್ಶನ ನೀಡಬೇಕು ಎಂಬ ಬಗ್ಗೆ ನಾನು ತಯಾರಿ ಮಾಡಿಕೊಂಡಿದ್ದೇನೆ. 2010ರಲ್ಲಿ ನಾನು ಭಾರತದಲ್ಲಿ ನಡೆದ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದೇನೆ. ಅಲ್ಲದೆ 2012ರಲ್ಲಿ ಡೆಲ್ಲಿ ಡೇರ್‌ಡೆವಿಲ್ ಐಪಿಎಲ್ ತಂಡದ ಪರ ಆಡಿದ್ದು, ಆ ಅನುಭವವನ್ನು ಉಪಯೋಗಿಸಿಕೊಳ್ಳಲಿದ್ದೇನೆ' ಎಂದಿದ್ದಾರೆ ಮ್ಯಾಕ್ಸ್‌ವೆಲ್.