ಕರಾಚಿ: ಪಾಕಿಸ್ತಾನದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತೇ ಆರಂಭವಾಗದಂತೆ ಕೆಲವು ಷಡ್ಯಂತ್ರಗಳು ನಡೆಯುತ್ತಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಜಾಕಾ ಅಶ್ರಫ್ ತಿಳಿಸಿದ್ದಾರೆ. ವಿಶ್ವ ಕ್ರಿಕೆಟ್ನಲ್ಲಿ ಪಾಕಿಸ್ತಾನ ಕ್ರಿಕೆಟನ್ನು ಪ್ರತ್ಯೇಕವಾಗಿಡಲು ಷಡ್ಯಂತ್ರ ನಡೆಯುತ್ತಿರುವ ಬಗ್ಗೆ ನನಗೆ ಅರಿವಿದೆ. ಆದರೆ ನಾವು ನಮ್ಮ ಭರವಸೆಯನ್ನು ಕೈಬಿಟ್ಟಿಲ್ಲ ಹಾಗೂ ಸೂಪರ್ ಲೀಗ್ ಟಿ20 ಪಂದ್ಯಾವಳಿಯನ್ನು ಆಯೋಜಿಸುವ ಬಗ್ಗೆ ನಾವು ವಿಶ್ವಾಸ ಹೊಂದಿದ್ದು, ಈ ಮೂಲಕ ಪಾಕಿಸ್ತಾನದಲ್ಲಿ ಕ್ರಿಕೆಟ್ ಕ್ರೀಡೆ ಮತ್ತೇ ಅಸ್ತಿತ್ವ ಪಡೆಯಲಿದೆ ಎಂದು ಅಶ್ರಫ್ ಅಭಿಪ್ರಾಯಪಟ್ಟಿದ್ದಾರೆ. ಕೇಲವರಿಗೆ ಪಾಕಿಸ್ತಾನ್ ಸೂಪರ್ ಲೀಗ್ ಆರಂಭವಾಗುವುದು ಇಷ್ಟವಿಲ್ಲ ಹಾಗೆಯೇ ಪಾಕ್ನಲ್ಲಿ ಅಂತರಾಷ್ಟ್ರೀಯ ಪಂದ್ಯಗಳು ನಡೆಯಬಾರದು ಎಂಬ ಮನೋಭಾವ ಹೊಂದಿದ್ದಾರೆ. ಆದರೆ ಪಿಸಿಬಿ ತನ್ನ ಭರವಸೆ ಕಳೆದುಕೊಳ್ಳದೇ ಎಲ್ಲಾ ಪ್ರಯತ್ನ ನಡೆಸುತ್ತಿದೆ ಎಂದು ಅವರು ತಿಳಿಸಿದರು.