ಭಾನುವಾರ ತಂಡದ ಆಯ್ಕೆ

Updated on: 

ಮುಂಬೈ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಫೆ.22 ರಿಂದ ಆರಂಭವಾಗಲಿದ್ದು, ಭಾನುವಾರ ಆಯ್ಕೆ ಸಮಿತಿಯು ಈ ಸರಣಿಗಾಗಿ ತಂಡವನ್ನು ಆಯ್ಕೆ ಮಾಡಲಿದೆ. ಭಾನುವಾರ ಇಲ್ಲಿನ ಕ್ರಿಕೆಟ್ ಸೆಂಟರ್‌ನಲ್ಲಿ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಸಭೆ ಸೇರಿ ತಂಡವನ್ನು ಆಯ್ಕೆ ಮಾಡಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏರ್‌ಟೆಲ್ ಟೆಸ್ಟ್ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಸಲುವಾಗಿ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಫೆ.10 ಭಾನುವಾರದಂದು ಮುಂಬೈನ ಕ್ರಿಕೆಟ್ ಸೆಂಟರ್‌ನಲ್ಲಿ ಸಭೆ ಸೇರಲಿದೆ ಎಂದು ಬಿಸಿಸಿಐನ ಕಾರ್ಯದರ್ಶಿ ಸಂಜಯ್ ಜಗದಾಳೆ ತಿಳಿಸಿದ್ದಾರೆ.
ನತಂರ ಭಾರತ ತಂಡ ಫೆ.15 ರಿಂದ 18ರ ವರೆಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲಿದೆ.
ಕಳೆದ ವರ್ಷ ಬಿಸಿಸಿಐ ದೇಶದಾದ್ಯಂತ ಎಲ್ಲಾ ಬೌಲರ್‌ಗಳಿಗೆ ಮುಕ್ತ ಅಭ್ಯಾಸ ಶಿಬಿರವನ್ನು ಏರ್ಪಡಿಸಿತ್ತು. ಇದರಲ್ಲಿ ಕೆಲ ಉತ್ತಮ ಬೌಲರ್‌ಗಳ ಪಟ್ಟಿಯನ್ನು ತಯಾರಿಸಿದ್ದು, ಈ ಆಟಗಾರರ ಬಗ್ಗೆ ಮುಂಬೈ, ಚೆನೈ ಹಾಗೂ ಮೊಹಾಲಿಯಲ್ಲಿನ ಪ್ರಾದೇಶಿಕ ಅಕಾಡೆಮಿಗಳಿಗೆ ಕಳುಹಿಸಲಾಗಿದ್ದು, ಅಲ್ಲಿನ ಕೋಚ್‌ಗಳಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ.
ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗಿರುವ ಯುವ ಬೌಲರ್‌ಗಳು ಭಾರತ ತಂಡದ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಹಿರಿಯ ಬ್ಯಾಟ್ಸ್‌ಮನ್‌ಗಳಿಗೆ ಬೌಲಿಂಗ್ ಮಾಡಲಿದ್ದಾರೆ ಎಂದು ಜಗದಾಳೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com