ರ್ಯಾಂಕಿಂಗ್: ಅಗ್ರ ಸ್ಥಾನದಲ್ಲಿ ಮುಂದುವರಿದ ಭಾರತ

ದುಬೈ: ಕಳೆದ ಜನವರಿಯಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯನ್ನು ಗೆಲ್ಲುವ ಮೂಲಕ ಏಕದಿನ ಕ್ರಿಕೆಟ್ನಲ್ಲಿ ನಂ.1 ಪಟ್ಟಕ್ಕೇರಿದ್ದ ಟೀಂ ಇಂಡಿಯಾ, ಸೋಮವಾರ ಬಿಡುಗಡೆಯಾದ ಹೊಸ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ತನ್ನ ನಂ.1 ಪಟ್ಟ ಉಳಿಸಿಕೊಳ್ಳುವ ಮೂಲಕ ಅಗ್ರ ಸ್ಥಾನದಲ್ಲಿ ಮುಂದುವರೆದಿದೆ.
ಭಾರತ ತಂಡ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ 119 ಅಂಕಗಳನ್ನು ಪಡೆದು ಅಗ್ರ ಸ್ಥಾನದಲ್ಲಿದ್ದರೆ, ಇನ್ನು ಇಂಗ್ಲೆಂಡ್ ತಂಡವು ಸಹ 119 ಅಂಕಗಳನ್ನು ಪಡೆದುಕೊಂಡಿದ್ದರೂ ಎರಡನೇ ಸ್ಥಾನದಲ್ಲಿದೆ.
ಸದ್ಯ ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ಪ್ರವಾಸದಲ್ಲಿದ್ದು, ಮೂರು ಏಕದಿನ ಪಂದ್ಯಗಳ ಸರಣಿಯನ್ನಾಡಲಿದೆ. ಒಂದುವೇಳೆ ಇಂಗ್ಲೆಂಡ್ ತಂಡ ಈ ಸರಣಿಯನ್ನು ಜಯಿಸಿದರೆ ಭಾರತ ತಂಡವನ್ನು ಹಿಂದಿಕ್ಕಿ ನಂ.1 ಪಟ್ಟಕ್ಕೇರಲಿದೆ.
ಇನ್ನು ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 5 ಏಕದಿನ ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಆಸ್ಟ್ರೇಲಿಯಾ ತಂಡ 116 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಉಳಿದಂತೆ ದಕ್ಷಿಣ ಆಫ್ರಿಕಾ 112 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ, 110 ಅಂಕಗಳೊಂದಿಗೆ ಶ್ರೀಲಂಕಾ ತಂಡ 5ನೇ ಸ್ಥಾನದಲ್ಲಿದೆ.
ಇನ್ನು ಏಕದಿನ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಭಾರತದ ವಿರಾಟ್ ಕೊಹ್ಲಿ 812 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಮುಂದುವರೆದಿದ್ದು, ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ 784 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ. 669 ಅಂಕಗಳನ್ನು ಪಡೆದಿರುವ ಸುರೇಶ್ ರೈನಾ 11ನೇ ಸ್ಥಾನದಲ್ಲಿದ್ದಾರೆ.
ದಕ್ಷಿಣ ಆಫ್ರಿಕಾದ ಹಷೀಂ ಆಮ್ಲಾ 886 ಹಾಗೂ ಎಬಿ ಡಿವಿಲಿಯರ್ಸ್ 834 ಅಂಕಗಳೊಂದಿಗೆ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.
ಬೌಲರ್ಗಳ ಪಟ್ಟಿಯಲ್ಲಿ ಪಾಕಿಸ್ಥಾನದ ಸಯದ್ ಅಜ್ಮಲ್ 801 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು, ಮಹಮದ್ ಹಫೀಜ್ 753 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಭಾರತದ ರವೀಂದ್ರ ಜಡೇಜಾ 663 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದ್ದು, ಆರ್.ಅಶ್ವಿನ್ 642 ಅಂಕಗಳೊಂದಿಗೆ 14ನೇ ಸ್ಥಾನದಲ್ಲಿದ್ದಾರೆ.
ಆಲ್ರೌಂಡರ್ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಮಹಮದ್ ಹಫೀಜ್ 428 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು, ಭಾರತದ ರವೀಂದ್ರ ಜಡೇಜಾ 333 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


