ಕ್ರೀಡೆ

5ನೇ ಸ್ಥಾನಕ್ಕೆ ಲಂಕಾ ಸೆಣಸು

Published On :

ಕಟಕ್: ಮಹಿಳಾ ವಿಶ್ವಕಪ್‌ನ ಸೂಪರ್ ಸಿಕ್ಸ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು, ಇಂದು ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ತಂಡಗಳು 5ನೇ ಸ್ಥಾನಕ್ಕಾಗಿ ಇಲ್ಲಿನ ಬಾರಾಬತಿ ಕ್ರೀಡಾಂಗಣದಲ್ಲಿ ಸೆಣೆಸಾಟ ನಡೆಸಲಿದ್ದಾರೆ.
ಸೂಪರ್ ಸಿಕ್ಸ್ ಹಂತದ ಪಂದ್ಯದಲ್ಲಿ ಹರಿಣಗಳು ಲಂಕಾ ತಂಡವನ್ನು 110ರನ್‌ಗಳ ಅಂತರದಲ್ಲಿ ಮಣಿಸಿತು. ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ಲಂಕನ್ನರು ಕಾಯುತ್ತಿದ್ದು, ಈ ಪಂದ್ಯ ಉಭಯ ತಂಡಗಳಿಗೂ ಪ್ರತಿಷ್ಠೆಯ ಪಂದ್ಯವಾಗಿದೆ.
ಪಂದ್ಯಾವಳಿಯ ಘಟಾನುಘಟಿ ತಂಡಗಳಾದ ಇಂಗ್ಲೆಂಡ್ ಹಾಗೂ ಆತಿಥೇಯ ಭಾರತ ತಂಡವನ್ನು ಮಣಿಸಿ ಉತ್ತಮ ಆರಂಭ ಪಡೆದಿದ್ದ ಲಂಕನ್ನರು ಸೂಪರ್ ಸಿಕ್ಸ್ ಹಂತಕ್ಕೆ ಲಗ್ಗೆ ಇಟ್ಟಿದ್ದರು. ಪ್ರಸ್ತುತ ಈ ಎರಡು ತಂಡಗಳು ಪಂದ್ಯಾವಳಿಯಿಂದ ಹೊರಗುಳಿದಿದ್ದು, ಗೆಲುವಿನೊಂದಿಗೆ ತವರಿಗೆ ತೆರಳಲು ಚಿಂತನೆ ನಡೆಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.