ಕ್ರೀಡೆ

ಚಿನ್ನಸ್ವಾಮಿಯಲ್ಲಿ ಕಾಣಿಸಿಕೊಂಡ ಬೆಂಕಿ

Published On :

ಚಿನ್ನಸ್ವಾಮಿಯಲ್ಲಿ ಭಾರತ ತಂಡ ಅಭ್ಯಾಸ ನಡೆಸುತ್ತಿದ್ದ ವೇಳೆ ಕ್ರೀಡಾಂಗಣದಲ್ಲಿ ಲಘು ಬೆಂಕಿ ಕಾಣಿಸಿಕೊಂಡ ಕೆಲಕಾಲ ಗೊಂದಲಕ್ಕೆ ಕಾರಣವಾಯಿತು. ಕ್ರೀಡಾಂಗಣದಲ್ಲಿನ ಮೆಂಬರ್ಸ್ ಸ್ಟಾಂಡ್‌ನ ಬಳಿ ಬಿಳಿ ಬಟ್ಟೆಯನ್ನು ಉಪಯೋಗಿಸಿ ನಿರ್ಮಿಸಲಾಗಿದ್ದ ಸೈಟ್‌ಸ್ಕ್ರೀನ್‌ಗೆ ಬೆಂಕಿ ತಗುಲಿತು. ಕ್ರೀಡಾಂಗಣದಲ್ಲಿ ವೆಲ್ಡಿಂಗ್ ಕಾರ್ಯ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವೆಲ್ಡಿಂಗ್ ನಡೆಯುತ್ತಿದ್ದ ಜಾಗದಿಂದ ಹಾರಿದ ಕಿಡಿ ಹತ್ತಿರದಲ್ಲೇ ಇದ್ದ ಸ್ಕ್ರೀನ್‌ಗೆ ತಾಗಿ ಬೆಂಕಿ ಕಾಣಿಸಿಕೊಂಡಿತು ಎಂದು ಸ್ಥಳದಲ್ಲೇ ಇದ್ದ ಕೆಎಸ್‌ಸಿಎ ಕಾರ್ಯದರ್ಶಿ ಜವಾಗಲ್ ಶ್ರೀನಾಥ್ ತಿಳಿಸಿದರು. 'ಬೆಂಕಿಯಿಂದ ಭಾರತ ತಂಡ ನಡೆಸುತ್ತಿರುವ ಅಭ್ಯಾಸಕ್ಕೆ ತೊಂದರೆ ಆಗಲಿಲ್ಲ' ಎಂದು ತಿಳಿಸಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.