ಚಿನ್ನಸ್ವಾಮಿಯಲ್ಲಿ ಅಭ್ಯಾಸ ಮುಂದುವರಿಸಿದ ಭಾರತ

ಬೆಂಗಳೂರು: ಮುಂದಿನ ವಾರದಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಭರ್ಜರಿ ತಾಲೀಮು ನಡೆಸುತ್ತಿದ್ದು, ಇಲ್ಲಿ ನಡೆಯುತ್ತಿರುವ ತರಬೇತಿ ಶಿಬಿರದ ಎರಡನೇ ದಿನ ಫೀಲ್ಡಿಂಗ್ ಅಭ್ಯಾಸ ನಡೆಸಿದೆ.
ಉದ್ಯಾನ ನಗರಿಯಲ್ಲಿನ ಪ್ರತಿಕೂಲ ಹವಾಮಾನದಲ್ಲಿ ಬೆಳಗ್ಗೆ 9.40ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ ಟೀಂ ಇಂಡಿಯಾದ ಆಟಗಾರರು, 12.40ರ ವರೆಗೂ ಸತತ ಮೂರು ತಾಸುಗಳ ಕಾಲ ಫೀಲ್ಡಿಂಗ್ ಅಭ್ಯಾಸ ನಡೆಸಿತು.
ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಂತೆ ಶಿಥಿಲ ವ್ಯಾಯಾಮ ಮಾಡಿದ ಆಟಗಾರರು ಫೀಲ್ಡಿಂಗ್ ಅಭ್ಯಾಸಕ್ಕೆ ತಯಾರಿ ನಡೆಸಿದರು. ನಂತರ ತಂಡದ ಹಿರಿಯ ಹಾಗೂ ಯುವ ಆಟಗಾರರರು ನಿರಂತರವಾಗಿ ಫೀಲ್ಡಿಂಗ್ ಅಭ್ಯಾಸ ನಡೆಸಿದರು.
ತಂಡದ ಆಟಗಾರರು ಮೂರು ಗುಂಪುಗಳಾಗಿ ತಂಡದ ಕೋಚ್ ಡಂಕನ್ ಫ್ಲೆಚರ್, ಫೀಲ್ಡಿಂಗ್ ಕೋಚ್ ಟ್ರೆವೊರ್ ಪೆನ್ನಿ ಹಾಗೂ ಬೌಲಿಂಗ್ ಕೋಚ್ ಜೊ ಡೇವ್ಸ್ ನೇತೃತ್ವದಲ್ಲಿ ಕ್ಲೊಸ್ ಇನ್ ಹಾಗೂ ಬೌಂಡರಿಗಳಲ್ಲಿ ಕ್ಯಾಚಿಂಗ್ ಅಭ್ಯಾಸ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


