ವಿಶ್ವಕಪ್ ಗೆಲುವಿನೊಂದಿಗೆ ಭಾರತೀಯ ಮೂಲದ ಆಸೀಸ್ ಆಟಗಾರ್ತಿ ಸ್ತಾಲೇಕರ್ ವಿದಾಯ
ಮುಂಬೈ: ವಿಶ್ವ ಮಹಿಳಾ ಕ್ರಿಕೆಟ್ ಕಂಡ ಅತ್ಯುತ್ತಮ ಆಲ್ರೌಂಡರ್ ಆಟಗಾರ್ತಿಯರಲ್ಲಿ ಲೀಸಾ ಸ್ತಾಲೇಕರ್ ಕೂಡ ಒಬ್ಬರಾಗಿದ್ದು, ಅವರು ಮಹಿಳಾ ವಿಶ್ವಕಪ್ ಅನ್ನು ಗೆಲ್ಲುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ವಿಶ್ವಕಪ್ ಫೈನಲ್ನಲ್ಲಿ ಉತ್ತಮ ಪ್ರದರ್ಶನ ತೋರಿದ ಸ್ಟಾಲೇಕರ್ 20 ರನ್ ನೀಡಿ ಎರಡು ವಿಕೆಟ್ ಹಾಗೂ ಒಂದು ಅದ್ಭುತ ಕ್ಯಾಚ್ ಪಡೆಯುವ ಮೂಲಕ, ತಂಡದ 114 ರನ್ಗಳ ಜಯದಲ್ಲಿ ಪಾಲು ಹೊಂದಿದ್ದಾರೆ. 2001ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಸ್ತಾಲೇಕರ್, ಇದುವರೆಗೂ 8 ಟೆಸ್ಟ್, 125 ಏಕದಿನ ಹಾಗೂ 54 ಟಿ20 ಪಂದ್ಯಗಳನ್ನಾಡಿದ್ದು ಉತ್ತಮ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 416 ರನ್, ಏಕದಿನ ಪಂದ್ಯಗಳಲ್ಲಿ 2728 ರನ್ ಹಾಗೂ ಟಿ20ಯಲ್ಲಿ 769 ರನ್ಗಳಿಸಿದ್ದಾರೆ. ಇದರ ಜತೆಗೆ 2005ರ ಏಕದಿನ ವಿಶ್ವಕಪ್ ಹಾಗೂ 2013ರ ವಿಶ್ವಕಪ್ ಗೆದ್ದ ತಂಡದಲ್ಲಿ ಸ್ತಾಲೇಕರ್ ಕೂಡ ಒಬ್ಬರಾಗಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ 1000 ರನ್ ಹಾಗೂ 100 ವಿಕೆಟ್ ಪಡೆದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಸಹ ಸ್ತಾಲೇಕರ್ ಹೊಂದಿದ್ದಾರೆ. ಮೂರು ಮಾದರಿಯ ಕ್ರಿಕೆಟ್ನಲ್ಲೂ ಸ್ತಾಲೇಕರ್ ಉತ್ತಮ ಬೌಲಿಂಗ್ ದಾಖಲೆ ಹೊಂದಿದ್ದಾರೆ. ಟೆಸ್ಟ್ ಪಂದ್ಯದಲ್ಲಿ 23 ವಿಕೆಟ್, ಏಕದಿನದಲ್ಲಿ 146 ಹಾಗೂ ಟಿ20ಯಲ್ಲಿ 60 ವಿಕೆಟ್ ಕಬಳಿಸಿದ್ದಾರೆ. ಪ್ರಸ್ತುತ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಟಿ20ಯ ಆಲ್ರೌಂಡರ್ ಪಟ್ಟಿಯಲ್ಲಿ ಅಗ್ರ ಸ್ಥಾನ ಹಾಗೂ ಏಕದಿನ ಆಲ್ರೌಂಡರ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಇದರ ಜತೆಗೆ ಸ್ತಾಲೇಕರ್ 2010 ಹಾಗೂ 2012ರ ಟಿ20 ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

