ನಾನು ಬಾಕ್ಸಿಂಗ್ ಫೆಡರೇಷನ್ ವಿವಾದ ಬಗೆಹರಿಸಬಲ್ಲೆ: ವಿಜೇಂದ್ರ ಸಿಂಗ್
ನವದೆಹಲಿ: ಅವಕಾಶ ಕೊಟ್ಟರೆ ಭಾರತೀಯ ಬಾಕ್ಸಿಂಗ್ ಅಸೋಸಿಯೇಷನ್‌ನಲ್ಲಿನ ಗೊಂದಲವನ್ನು ಸಂಪೂರ್ಣವಾಗಿ ನಿವಾರಿಸಬಲ್ಲೆ ಎಂದು ಬೀಜಿಂಗ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ವಿಜೇಂದ್ರ ಸಿಂಗ್ ಮಂಗಳವಾರ ಹೇಳಿದ್ದಾರೆ. ರಾಷ್ಟ್ರೀಯ ಫೆಡರೇಷನ್ ಮೇಲೆ, ಅಂತಾರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ (ಎಐಬಿಎ) ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ವಿಜೇಂದ್ರ ಈ ಹೇಳಿಕೆ ನೀಡಿದ್ದಾರೆ. 'ಒಂದು ವೇಳೆ ನನಗೆ ಅವಕಾಶ ದೊರಕಿದರೆ, ಭಾರತೀಯ ಬಾಕ್ಸಿಂಗ್ ಫೆಡರೇಷನ್ ಜತೆ ನಾನು ಕಾರ್ಯನಿರ್ವಹಿಸಬಯಸುತ್ತೇನೆ. ಅಲ್ಲದೆ, ಅಲ್ಲಿನ ಗೊಂದಲಗಳನ್ನು ನಿವಾರಿಸಬಯಸುತ್ತೇನೆ.
ಇದರೊಂದಿಗೆ ನಿಷೇಧವನ್ನು ತೆರವುಗೊಳಿಸುವಂತೆ ಮಾಡಿ, ಭಾರತೀಯ ಬಾಕ್ಸರ್‌ಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಲು ಅವಕಾಶ ಮಾಡಿಕೊಡುತ್ತೇನೆ' ಎಂದು ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವಿಜೇಂದ್ರ ಅಭಿಪ್ರಾಯಪಟ್ಟಿದ್ದಾರೆ. ತೀರ್ಮಾನ ತೆಗೆದುಕೊಳ್ಳುವುದರಲ್ಲಿ ಕ್ರೀಡಾಪಟುಗಳನ್ನು ಪರಿಗಣಿಸುವ ಬಗ್ಗೆ ವಿಜೇಂದ್ರ ಹೆಚ್ಚು ಒತ್ತು ಕೊಟ್ಟಿದ್ದಾರೆ. 'ಐಒಎ, ಫೆಡರೇಷನ್‌ಗಳು ಅಥವಾ ಕ್ರೀಡಾ ಸಚಿವಾಲಯವಿರಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳುವಾಗಿ ಕ್ರೀಡಾಪಟುಗಳನ್ನು ಪರಿಗಣಿಸಬೇಕು' ಎಂದಿದ್ದಾರೆ. ಭಾರತೀಯ ಬಾಕ್ಸಿಂಗ್ ಅಸೋಸಿಯೇಷನ್ ಮೇಲೆ ಎಐಬಿಎ ನಿಷೇಧ ಹೇರಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ವಿಜೇಂದ್ರ ಸಿಂಗ್, ಶೀಘ್ರದಲ್ಲೇ ಸಮಸ್ಯೆ ಬಗಹರಿಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

