ಹರಿಣಗಳ ಚಿತ್ತ ಕ್ಲೀನ್‌ಸ್ವೀಪ್‌ನತ್ತ
ಸೆಂಚುರಿಯನ್: ಪ್ರಸ್ತುತ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ಜತೆಗೆ ಈ ಬಾರಿಯ ಟೆಸ್ಟ್ ಚಾಂಪಿಯನ್ ಪಟ್ಟಕ್ಕೇರಿರುವ ದಕ್ಷಿಣ ಆಫ್ರಿಕಾ ತಂಡ, ಶುಕ್ರವಾರದಿಂದ ಆರಂಭವಾಗಲಿರುವ ಮೂರನೇ ಹಾಗೂ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡುವ ತವಕದಲ್ಲಿದೆ.
ಮೊದಲ ಪಂದ್ಯದಲ್ಲಿ ಅದ್ಭುತ ಪ್ರದರ್ಶನದ ಮೂಲಕ ಜೊಹಾನ್ಸ್‌ಬರ್ಗ್‌ನಲ್ಲಿ 211 ರನ್‌ಗಳ ಗೆಲುವು ಸಾಧಿಸಿದ್ದ ಹರಿಣಗಳು, ಕೇಪ್‌ಟೌನ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿದರು. ಪಂದ್ಯಾವಳಿಯಲ್ಲಿ ಪಾಕಿಸ್ತಾನದ ಬ್ಯಾಟ್ಸ್‌ಮನ್‌ಗಳ ನಿದ್ದೆಗೆಡಿಸಿರುವ ಹರಿಣಗಳ ವೇಗಿಗಳು ಈ ಪಂದ್ಯದಲ್ಲೂ ತಮ್ಮ ಮಾರಕ ಬೌಲಿಂಗ್ ಮುಂದುವರಿಸಲು ನಿರ್ಧರಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೋಚ್ ಗ್ಯಾರಿ ಕರ್ಸ್ಟನ್, ಎರಡನೇ ಪಂದ್ಯದಲ್ಲಿ ಚೆಂಡು ಹೆಚ್ಚಿನ ತಿರುವು ಪಡೆಯುತ್ತಿತ್ತು. ಅಂತಿಮ ಪಂದ್ಯದಲ್ಲಿ ನಾವು ವೇಗಿಗಳಿಗೆ ಹೆಚ್ಚು ಸಹಕರಿಸುವ ಪಿಚ್ಚನ್ನು ನಿರೀಕ್ಷಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇದುವರೆಗೂ ದಕ್ಷಿಣ ಆಫ್ರಿಕಾಕ್ಕೆ 101 ಪಂದ್ಯಗಳಲ್ಲಿ ನಾಯಕತ್ವ ವಹಿಸಿರುವ ಗ್ರೇಮ್ ಸ್ಮಿತ್ 49 ಪಂದ್ಯಗಳಲ್ಲಿ ಗೆಲುವಿನ ರುಚಿ ಕಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯವನ್ನು ಗೆಲ್ಲುವ ಮೂಲಕ ನಾಯಕನಾಗಿ 50 ಪಂದ್ಯಗಳಲ್ಲಿ ಜಯ ಕಾಣಬೇಕೆಂಬ ತವಕದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

