ಏಷ್ಯಾ ಜೂನಿಯರ್ ಸ್ಕ್ವಾಷ್: ಕ್ವಾರ್ಟರ್ಗೆ ಭಾರತ ಬಾಲಕರು
ಸೀಯೋಲ್: ಭಾರತದ ಬಾಲಕರ ಸ್ಕ್ವಾಷ್ ತಂಡ ಏಷ್ಯಾ ಜೂನಿಯರ್ ಸ್ಕ್ವಾಷ್ ಚಾಂಪಿಯನ್ಷಿಪ್ನ ಕ್ವಾರ್ಟರ್ಫೈನಲ್ಗೆ ಲಗ್ಗೆ ಹಾಕಿದೆ. ಅಂತಿಮ ಲೀಗ್ ಪಂದ್ಯದಲ್ಲಿ ಜೋರ್ಡಾನ್ ವಿರುದ್ಧ 3-0 ಅಂತರದಿಂದ ಜಯ ಸಾಧಿಸಿದ ಭಾರತ ಈಗ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಇರಾನ್ ವಿರುದ್ಧ ಸೆಣಸಲಿದೆ.
ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಚೀನಾವನ್ನು 3-0 ಅಂತರದಿಂದ ಪರಾಭವಗೊಳಿಸಿದ ಭಾರತ, ತಮ್ಮ ಗುಂಪಿನ ಅಂತಿಮ ಲೀಗ್ ಪಂದ್ಯದಲ್ಲಿ ಜೋರ್ಡಾನ್ ಮಣಿಸಿ ಪೋಲ್ ಪೋಸೆಷನ್ಗೆ ಅರ್ಹತೆ ಪಡೆಯಿತು.
ಬೆಳಗ್ಗೆ ನಡೆದ ಪಂದ್ಯದಲ್ಲಿ ಬಾಲಕರ ತಂಡ ಅತಿಥೇಯ ಕೊರಿಯಾ ವಿರುದ್ಧ ಜಯ ಸಾಧಿಸಿತ್ತು. ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅಂತಿಮ 8ರ ಘಟ್ಟಕ್ಕೆ ಹೆಜ್ಜೆ ಹಾಕಿದೆ.
ಇನ್ನು ಭಾರತದ ಬಾಲಕಿಯರು ಸಹ ಪಂದ್ಯಾವಳಿಯಲ್ಲಿ ಆಕರ್ಷಕ ಪ್ರದರ್ಶನ ನೀಡುತ್ತಿದ್ದಾರೆ. ಚೀನಾ ಮತ್ತು ಕೊರಿಯಾ ವಿರುದ್ಧ ಬಾಲಕಿಯರ ತಂಡ ಜಯ ಸಾಧಿಸಿದೆ.
ಚೀನಾ ವಿರುದ್ಧ 3-0 ಅಂತರದಿಂದ ಜಯ ಸಾಧಿಸಿದ ಬಾಲಕಿಯರು, ನಂತರ ಕೊರಿಯಾ ವಿರುದ್ಧ ಸಹ 3-0 ಅಂತರದಿಂದ ಜಯ ಸಾಧಿಸಿದರು. ಬಾಲಕಿಯರ ತಂಡ ಶುಕ್ರವಾರ ನಡೆಯಲಿರುವ ತಮ್ಮ ಅಂತಿಮ ಲೀಗ್ ಪಂದ್ಯದಲ್ಲಿ ಜಪಾನ್ ವಿರುದ್ಧ ಸೆಣಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

