ಕ್ರೀಡೆ

ಜುರಿಚ್ ಟೂರ್ನಿಗೆ ವಿಶ್ವನಾಥನ್

Published On :

ಜುರಿಚ್: ಇತ್ತೀಚೆಗೆ ಜರ್ಮನಿಯಲ್ಲಿ ನಡೆದ ಗ್ರೆಂಕ್ ಕ್ಲಾಸಿಕ್ ಚೆಸ್ ಚಾಂಪಿಯನ್‌ನ ಕೊನೆ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್, ಇಲ್ಲಿ ಆರಂಭವಾಗಲಿರುವ ಜುರಿಚ್ ಚೆಸ್ ಚಾಲೆಂಜ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಕಳೆದ ಪಂದ್ಯಾವಳಿಯಲ್ಲಿ ಕೊನೆಯ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಪಂದ್ಯಾವಳಿಯಲ್ಲಿ ಮುನ್ನಡೆ ಸಾಧಿಸಿದ್ದ ಇಟಲಿಯ ಫ್ಯಾಬಿಯಾನೊ ಕರ್ವಾನಾ ಅವರನ್ನು ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡರು. ಆದರೆ ಈ ಪಂದ್ಯಾವಳಿಯಲ್ಲಿ ಆನಂದ್ ಅವರ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು, ಆನಂದ್ ಕಳೆದ ಪಂದ್ಯಾವಳಿಗಿಂತ ಕಠಿಣ ಸವಾಲು ಎದುರಿಸಲಿದ್ದಾರೆ. ಈ ಪಂದ್ಯಾವಳಿ ನಾಲ್ವರು ಆಟಗಾರರ ಡಬಲ್ ರೌಂಡ್ ರಾಬಿನ್ ಪಂದ್ಯಾವಳಿಯಾಗಿದ್ದು, ಪ್ರತಿಯೊಬ್ಬ ಆಟಗಾರರು 6 ಸುತ್ತುಗಳನ್ನಾಡಲಿದ್ದಾರೆ.
ಈ ಪಂದ್ಯಾವಳಿಯಲ್ಲಿ ಹೆಚ್ಚು ರೇಟಿಂಗ್ಸ್ ಪಡೆದಿರುವ ರಷ್ಯಾದ ವ್ಲಾಡ್ಮಿರ್ ಕ್ರಾಮ್ನಿಕ್ ಅವರು ಪಂದ್ಯಾವಳಿಯ ಪ್ರಮುಖ ಆಟಗಾರನಾಗಿದ್ದು, ವಿಶ್ವ ಚಾಂಪಿಯನ್ ಆನಂದ್ ಎರಡನೇ ಶ್ರೇಯಾಂಕ ಪಡೆದಿದ್ದಾರೆ. ಇನ್ನು ಇಟಲಿಯ ಫ್ಯಾಬಿಯಾನೊ ಕರ್ವಾನ ಮೂರನೇ ಶ್ರೇಯಾಂಕ ಪಡೆದಿದ್ದು, ಇಸ್ರೇಲ್‌ನ ಬೊರಿಸ್ ಗೆಲ್ಫಂಡ್ ನಾಲ್ಕನೇ ಶ್ರೇಯಾಂಕ ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.