ಪಂಜಾಬ್ಗೆ ಕೇರಳ ಪಂಚ್
ವಿಶಾಖಪಟ್ಟಣ: ವಿಜಯ್ ಹಜಾರೆ ಟ್ರೋಫಿಯ ಕ್ವಾಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ತಂಡದ ವಿರುದ್ಧ ಅಚ್ಚರಿಯ ಪ್ರದರ್ಶನ ತೋರಿದ ಕೇರಳ ತಂಡ, ಪಂಜಾಬ್ ವಿರುದ್ಧ 46 ರನ್ಗಳ ಜಯ ಸಾಧಿಸಿದೆ.
ಬ್ಯಾಟಿಂಗ್ಗೆ ಹೆಚ್ಚು ಸಹಕರಿಸುವ ಇಲ್ಲಿನ ಪೋರ್ಟ್ ಕ್ರೀಡಾಂಗಣದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಕೇರಳ ತಂಡ ನಿಗಧಿತ 50 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 320ರನ್ ಕಲೆ ಹಾಕಿತು.
ಕೇರಳ ತಂಡದ ಪರ ಆರಂಭಿಕ ಬ್ಯಾಟ್ಸ್ಮನ್ ವಾಸುದೇವನ್ ಜಗದೀಶ್ 119 (120) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಸಚಿನ್ ಬೇಬಿ ಅಜೇಯ 104 (70) ರನ್ಗಳಿಸಿ ತಂಡ ಬೃಹತ್ ಮೊತ್ತ ದಾಖಲಿಸಲು ನೆರವಾದರು.
ಈ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ ತಂಡ 47.3 ಓವರ್ಗಳಲ್ಲಿ 274 ರನ್ಗಳಿಸಿ ಆಲೌಟ್ಯಿತು. ಪಂಜಾಬ್ ತಂಡದ ಪರ ಗುರ್ಕೀರತ್ ಸಿಂಗ್ 99 (106) ಹಾಗೂ ಮನ್ದೀಪ್ ಸಿಂಗ್ 81 (96) ರನ್ಗಳಿಸಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು.
ದೆಹಲಿಗೆ ಜಯ: ಇನ್ನು ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ದೆಹಲಿ ತಂಡ ಗುಜರಾತ್ ತಂಡದ ವಿರುದ್ಧ 8 ಕೆಟ್ಗಳ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ದೆಹಲಿ ತಂಡ, ಗುಜರಾತ್ ತಂಡವನ್ನು 126 ರನ್ಗಳಿಗೆ ಆಲೌಟ್ ಮಾಡಿತು. ನಂತರ ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ದೆಹಲಿ ತಂಡ 28.4 ಓವರ್ಗಳಲ್ಲಿ 2 ವಿಕೆಟ್ಸ ಕಳೆದುಕೊಂಡು 130 ರನ್ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

