ಕ್ರೀಡೆ

ನಾಲ್ಕನೇ ಸ್ಥಾನಕ್ಕೆ ಏರಿದ ಧೋನಿ ಬಾಯ್ಸ್

Published On :

ದುಬೈ: ಕಳಪೆ ಪ್ರದರ್ಶನದ ಮೂಲಕ ತವರಿನಲ್ಲೇ ಇಂಗ್ಲೆಂಡ್ ವಿರುದ್ಧ 2-1 ಅಂತರದಲ್ಲಿ ಟೆಸ್ಟ್ ಸರಣಿ ಸೋತ ಹಿನ್ನಲೆಯಲ್ಲಿ 5ನೇ ಸ್ಥಾನಕ್ಕೆ ಕುಸಿತಿದ್ದ ಧೋನಿ ಬಾಯ್ಸ್, ಈಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ 4ನೇ ಸ್ಥಾನಕ್ಕೆ ಏರುವ ಮೂಲಕ ಸಮಾಧಾನ ಪಟ್ಟಿದೆ.
ಬುಧವಾರ ಬಿಡುಗಡೆಯಾದ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ತಂಡ ಹಾಗೂ ಆಟಗಾರರು ತಮ್ಮ ಸ್ಥಾನದಲ್ಲಿ ಮೇಲೆರಿದ್ದಾರೆ. ರ್ಯಾಂಕಿಂಗ್ ಪಟ್ಟಿಯಲ್ಲಿ 105 ಅಂಕಗಳನ್ನು ಪಡೆದಿರುವ ಭಾರತ ತಂಡ ನಾಲ್ಕನೇ ಸ್ಥಾನಕ್ಕೆ ಏರಿದೆ. ಚೆನೈ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಸಚಿನ್, ಅಶ್ವಿನ್ ಹಾಗೂ ಧೋನಿ ತಮ್ಮ ರ್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ. 20ನೇ ಸ್ಥಾನದಲ್ಲಿದ್ದ ಸಚಿನ್ ತೆಂಡೂಲ್ಕರ್ ಮೂರು ಸ್ಥಾನಗಳ ಏರಿಕೆ ಕಂಡಿದ್ದು, 17ನೇ ಸ್ಥಾನದಲ್ಲಿದ್ದಾರೆ. ಇನ್ನು ಈ ಹಿಂದೆ 36ನೇ ಸ್ಥಾನದಲ್ಲಿದ್ದ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ವೃತ್ತಿಜೀವನದ ಚೊಚ್ಚಲ ದ್ವಿಶತಕ ದಾಖಲಿಸಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದು, ರ್ಯಾಂಕಿಂಗ್‌ನಲ್ಲಿ 15 ಸ್ಥಾನಗಳ ಏರಿಕೆ ಕಂಡಿದ್ದು 21ನೇ ಸ್ಥಾನದಲ್ಲಿದ್ದಾರೆ. ಇನ್ನು ಎರಡೂ ಇನಿಂಗ್ಸ್‌ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಆರ್.ಅಶ್ವಿನ್ 11ನೇ ಸ್ಥಾನಕ್ಕೇರಿದ್ದು, ತಮ್ಮ ಟೆಸ್ಟ್ ಕ್ರಿಕೆಟ್‌ನಲ್ಲಿ ಶ್ರೇಷ್ಠ ರ್ಯಾಂಕಿಂಗ್ ಪಡೆದಿದ್ದಾರೆ. ಇನ್ನು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಹಶೀಂ ಆಮ್ಲಾ ಅಗ್ರ ಸ್ಥಾನ ಕಾಯ್ದುಕೊಂಡರೆ, ಬೌಲಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಡೇಲ್ ಸ್ಟೇಯ್ನ್ ನಂ.1 ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.