ನವದೆಹಲಿ: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಮಹಿಳೆಯರ ಸಿಂಗಲ್ಸ್ ರ್ಯಾಂಕಿಂಗ್ನಲ್ಲಿ 2ನೇ ಸ್ಥಾನ ಉಳಿಸಿಕೊಂಡಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಗುರುವಾರ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಲಂಡನ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಭಾರತದ ಸೈನಾ ನೆಹ್ವನಾಲ್ 80461.7444 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ. ಒಲಿಂಪಿಕ್ಸ್ ಚಾಂಪಿಯನ್ ಚೀನಾದ ಲೀ ಕ್ಸೂರಿ ಅವರು 94626.7153 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ವಿ. ಸಿಂಧು ಅವರು ಮಹಿಳೆಯರ ಸಿಂಗಲ್ಸ್ನಲ್ಲಿ ಯಥಾ 16ನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಸೈನಾ ನೆಹ್ವಾಲ್ ನಂತರ ಭಾರತಬ್ಯಾಡ್ಮಿಂಟನ್ನಲ್ಲಿ ಸಿಂಧು ಉತ್ತಮಪ್ರದರ್ಶನ ನೀಡತೊಡಗಿದ್ದು, ಭವಿಷ್ಯದ ಭರವಸೆಯ ಆಟಗಾರ್ತಿ ಎಂದೇ ಗುರುತಿಸಿಕೊಂಡಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪರುಪಲ್ಲಿ ಕಶ್ಯಪ್ ಅವರು ತಮ್ಮ ವೃತ್ತಿಶ್ರೇಷ್ಠ ರ್ಯಾಂಕಿಂಗ್ಒಂಬತ್ತನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪುರುಷ ವಿಭಾಗದಲ್ಲಿ ಮಲೇಷ್ಯಾದ ಲೀ ಚಾಂಗ್ ವೀ ಅವರು ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ.