ನ್ಯೂಜಿಲೆಂಡ್ ಪ್ರವಾಸದಲ್ಲಿ ಕಡಿತ?
ನವದೆಹಲಿ: ಮುಂದಿನ ವರ್ಷ ಫೆಬ್ರವರಿ ಹಾಗೂ ಮಾರ್ಚ್ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ಪ್ರವಾಸ ಮಾಡಲಿದ್ದು, ಪ್ರವಾಸದ ವೇಳಾಪಟ್ಟಿಯಲ್ಲಿ ಪಂದ್ಯಗಳನ್ನು ಸ್ವಲ್ಪ ಮಟ್ಟಿಗೆ ಕಡಿತಗೊಳಿಸಲಾಗುವುದು ಎಂದು ವರದಿಯೊಂದರಿಂದ ತಿಳಿದು ಬಂದಿದೆ.
ಈ ಹಿಂದಿನ ವೇಳಾಪಟ್ಟಿಯ ಪ್ರಕಾರ ಭಾರತ ತಂಡ ನ್ಯೂಜಿಲೆಂಡ್ ಪ್ರವಾಸದಲ್ಲಿ 3 ಟೆಸ್ಟ್, 5 ಏಕದಿನ ಹಾಗೂ 1 ಟಿ20 ಪಂದ್ಯವನ್ನಾಡಬೇಕಿತ್ತು.
ಆದರೆ ಮುಂದಿನ ವರ್ಷ ಇದೇ ಸಮಯದಲ್ಲಿ ಏಷ್ಯಾಕಪ್ ಪಂದ್ಯಾವಳಿಯನ್ನು ಆಯೋಜಿಸುವ ಸಲುವಾಗಿ ಈ ಪ್ರವಾಸದಲ್ಲಿನ ಪಂದ್ಯಗಳನ್ನು ಕಡಿತಗೊಳಿಸಲಾಗಿದ್ದು, ಭಾರತ ತಂಡ ಎರಡು ಟೆಸ್ಟ್, ಎರಡು ಏಕದಿನ ಹಾಗೂ ಎರಡು ಟಿ20 ಪಂದ್ಯಗಳನ್ನಾಡುವ ಸಾಧ್ಯತೆಗಳಿವೆ.
ಅಂತರ್ಜಾಲ ತಾಣವೊಂದರ ಪ್ರಕಾರ, ಈ ಹಿಂದಿನ ವೇಳಾಪಟ್ಟಿಯಲ್ಲಿ ಭಾರತ ತಂಡ 21 ದಿನಗಳ ಕಾಲ ಪ್ರವಾಸ ಕೈಗೊಳ್ಳಬೇಕಿತ್ತು ಆದರೆ ಪ್ರವಾಸವನ್ನು ಕಡಿತಗೊಳಿಸಿರುವ ಹಿನ್ನಲೆಯಲ್ಲಿ ಭಾರತ ತಂಡ 14 ದಿನಗಳ ಕಾಲ ಮಾತ್ರ ನ್ಯೂಜಿಲೆಂಡ್ ಪ್ರವಾಸ ಮಾಡಲಿದೆ.
ಈ ಸರಣಿ ಕುರಿತಂತೆ ಎರಡು ಕ್ರಿಕೆಟ್ ಮಂಡಳಿಗಳ ನಡುವೆ ಇದುವರೆಗೂ ಯಾವುದೇ ಒಪ್ಪಂಧವಾಗಿಲ್ಲ. ಈ ಪ್ರವಾಸದ ಪ್ರಸಾರದ ಹಕ್ಕು ಪಡೆದಿರುವ ನಿಯೋ (ನಿಂಬಸ್) ಈ ಬದಲಾವಣೆ ಕುರಿತ ಮಾಹಿತಿ ಪಡೆದಿದ್ದು, ಏಷ್ಯಾಕಪ್ ಪಂದ್ಯಾವಳಿಯನ್ನು ಸಹ ಪ್ರಸಾರ ಮಾಡಲಿದೆ.
2020ರ ವರೆಗೂ ನ್ಯೂಜಿಲೆಂಡ್ನಲ್ಲಿ ನಡೆಯಲಿರುವ ಎಲ್ಲಾ ಅಂತಾರಾಷ್ಟ್ರೀಯ ಪಂದ್ಯಗಳನ್ನು ಭಾರತದಲ್ಲಿ ನಿಯೋ ಪ್ರಸಾರಮಾಡಲಿದೆ.
ಭಾರತ ತಂಡದ ಬಿಡುವಿಲ್ಲದ ವೇಳಾಪಟ್ಟಿಯಿಂದ ಈ ಪ್ರವಾಸ ರದ್ದಾಗುವ ಸಾಧ್ಯತೆಗಳಿದ್ದವು ಆದರೆ ಎರಡೂ ರಾಷ್ಟ್ರಗಳ ಕ್ರಿಕೆಟ್ ಮಂಡಳಿಗಳು ಜತೆಗೂಡಿ ಚರ್ಚಿಸಿ ಪ್ರವಾಸವನ್ನು ಕಡಿತಗೊಳಿಸಲು ನಿರ್ಧರಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

