ಕ್ರೀಡೆ

ಸಂತೋಷ್ ಟ್ರೋಫಿ: ಸರ್ವೀಸಸ್ ವಿರುದ್ಧ ಕೇರಳ ಕಾದಾಟ

Published On :

ಕೊಚ್ಚಿ: ಈ ಬಾರಿಯ ಸಂತೋಷ್ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಕೇರಳ ಹಾಗೂ ಸರ್ವೀಸಸ್ ತಂಡಗಳು ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಕಾದಾಟ ನಡೆಸುತ್ತಿವೆ. ಈ ಎರಡೂ ತಂಡಗಳು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಹಿನ್ನಲೆಯಲ್ಲಿ ಇಂದಿನ ಪಂದ್ಯ ಹೆಚ್ಚು ಕುತೂಹಲ ಕೆರಳಿಸಿದೆ.
ಕೇರಳ ತಂಡ ತನ್ನ ತವರಿನ ಪ್ರೇಕ್ಷಕರ ಬೆಂಬಲದೊಂದಿಗೆ ಕಣಕ್ಕಿಳಿಯುತ್ತಿದ್ದು, ಪಂದ್ಯಾವಳಿಯಲ್ಲಿ ಕೊನೆ ಕ್ಷಣದಲ್ಲಿ ಗೋಲು ಗಳಿಸಿ ಪಂದ್ಯವನ್ನು ಜಯಿಸುವ ಕೌಶಲ್ಯ ಹೊಂದಿರುವ ಸರ್ವೀಸಸ್ ತಂಡ ಉತ್ತಮ ಆತ್ಮ ವಿಶ್ವಾಸದೊಂದಿಗೆ ಕಣಕ್ಕಿಳಿಯುತ್ತಿದೆ.
ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ಭರವಸೆ ಹೊಂದಿರುವ ಸರ್ವೀಸಸ್ ತಂಡದ ಕೋಚ್ ಸಜಿತ್ ಕುಮಾರ್, ನಮ್ಮ ತಂಡದಲ್ಲಿನ ಆಟಗಾರರ ಫಿಟ್ನೆಸ್ ಉನ್ನತ ಮಟ್ಟದಲ್ಲಿದೆ. ಪಂದ್ಯಾವಳಿಯಲ್ಲಿ ನಮ್ಮ ತಂಡ ಅಂತಿಮ ಹಂತದಲ್ಲಿ ಉತ್ತಮ ರೀತಿಯಲ್ಲಿ ಗೋಲುಗಳಿಸುವ ಕೌಶಲ್ಯ ಹೊಂದಿದ್ದು, ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದೇವೆ ಎಂದು ತಿಳಿಸಿದರು. ನಾವು ಪಂದ್ಯದ ದ್ವಿತಿಯಾರ್ಧದಲ್ಲಿ ಹಾಗೂ ಹೆಚ್ಚುವರಿ ಸಮಯದಲ್ಲಿ ಆಕ್ರಮಣಕಾರಿ ಆಟವನ್ನು ಪ್ರರ್ಶಿಸುತ್ತಿದ್ದು, ಉತ್ತಮ ಫಲಿತಾಂಶವನ್ನು ಪಡೆಯುತ್ತಿದ್ದೇವೆ. ಕ್ವಾಟರ್‌ಫೈನಲ್ ಪಂದ್ಯದಲ್ಲಿ ನಮ್ಮ ತಂಡದ ಆಟಗಾರರು ಅಂತಿಮ ಸಮಯದಲ್ಲಿ ಸಾಂಘಿಕ ಪ್ರದರ್ಶನದಿಂದ ಕೇವಲ ಒಂಬತ್ತು ನಿಮಿಷದಲ್ಲಿ ಎರಡು ಗೋಲುಗಳನ್ನು ದಾಖಲಿಸಿದ್ದು, ಎಲ್ಲರ ಗಮನ ಸೆಳೆದಿತ್ತು ಎಂದು ಕುಮಾರ್ ತಿಳಿಸಿದ್ದಾರೆ. ಇತ್ತ ಕೇರಳ ತಂಡದ ಕೋಚ್ ಎಂ.ಎಂ.ಜಾಕೋಬ್ ಕೂಡ ತಮ್ಮ ತಂಡದ ಆಟಗಾರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಂಡದ ಆಟಗಾರರು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ತವರಿನ ಪ್ರೇಕ್ಷಕರೆದುರು ಫೈನಲ್ ಪಂದ್ಯ ಆಡುತ್ತಿರುವುದರಿಂದ ನಮ್ಮ ತಂಡಕ್ಕೆ ಉತ್ತಮ ಬೆಂಬಲ ದೊರೆಯಲಿದೆ. ಅಲ್ಲದೇ ಒಂಬತ್ತು ವರ್ಷಗಳ ನಂತರ ನಮ್ಮ ತಂಡ ಪ್ರಶಸ್ತಿ ಗೆಲ್ಲುವ ಅವಕಾಶ ಪಡೆದಿದ್ದು, ಉತ್ತಮ ಪ್ರದರ್ಶನ ನೀಡುವುದಾಗಿ ತಿಳಿಸಿದ್ದಾರೆ. ಕಳೆದ ಬಾರಿಯ ಸಂತೋಷ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಸರ್ವೀಸಸ್  ವಿರುದ್ಧ 1-2ರಿಂದ ಸೋಲನುಭವಿದ್ದೆವು. ಆದರೆ ಈ ಬಾರಿ ನಾವು ನಮ್ಮ ತವರು ಪ್ರೇಕ್ಷಕರ ಸಮ್ಮುಖದಲ್ಲಿ ಕಾದಾಟ ನಡೆಸುತ್ತಿದ್ದು, ಪ್ರೇಕ್ಷಕರ ಬೆಂಬಲದಿಂದ ತಂಡದ ಆಟಗಾರರ ಆತ್ಮಸ್ಥೈರ್ಯವನ್ನು ಹೆಚ್ಚಿಸಲಿದೆ ಎಂದು ಜಾಕೋಬ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.