ಕ್ರೀಡೆ

2015 ವಿಶ್ವಕಪ್ ಅಧ್ಯಕ್ಷ ನಿಧನ

Published On :

ಸಿಡ್ನಿ: ಆಸ್ಟ್ರೇಲಿಯಾದ ಪ್ರಖ್ಯಾತ ಉದ್ಯಮಿ ಹಾಗೂ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ 2015ರ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯ ಅಧ್ಯಕ್ಷತೆ ವಹಿಸಿಕೊಂಡಿದ್ದ ಜೇಮ್ಸ್ ಸ್ಟ್ರಾಂಗ್ ಭಾನುವಾರ ನಿಧನರಾಗಿದ್ದಾರೆ. ಜೇಮ್ಸ್ ಸ್ಟ್ರಾಂಗ್ ಸಿಡ್ನಿಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ಇವರ ನಿಧನ ಕುರಿತು ಪ್ರತಿಕ್ರಿಯೆ ನೀಡಿರುವ ಐಸಿಸಿ ವಿಶ್ವಕಪ್ ಆಯೋಜಕ ಸಮಿತಿ, ಸ್ಟ್ರಾಂಗ್ ಅವರು ಮೃತಪಟ್ಟಿರುವುದು ದುರಾದೃಷ್ಟಕರ ಎಂದು ತಿಳಿಸಿದೆ. ಜೇಮ್ಸ್ ಸ್ಟ್ರಾಂಗ್ 2015ರ ವಿಶ್ವಕಪ್ ಪಂದ್ಯಾವಳಿ ಬಗ್ಗೆ ದೂರದೃಷ್ಟಿ ಹೊಂದಿದ್ದರು. ಹಾಗೆಯೇ ಪಂದ್ಯಾವಳಿ ಆಯೋಜನೆಗೆ ಉತ್ತಮ ವಾತಾವರಣ ಕಲ್ಪಿಸಿದ್ದರು ಎಂದು ವಿಶ್ವಕಪ್ ಆಯೋಜಕ ಸಮಿತಿ ತಿಳಿಸಿದೆ. ಸ್ಟ್ರಾಂಗ್ ಜತೆ ಸುಮಾರು 20ಕ್ಕು ಹೆಚ್ಚು ವರ್ಷಗಳ ಕಾಲ ಕೆಲಸ ಮಾಡಿರುವ ಐಸಿಸಿ ವಿಶ್ವಕಪ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಾನ್ ಹರ್ನ್‌ಡೆನ್, ಸ್ಟ್ರಾಂಗ್ ಅವರು ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ನ ಕ್ರೀಡಾ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.