ಕ್ರೀಡೆ

ಟೀಂ ಇಂಡಿಯಾಗೆ ಅಭಿನಂದನೆಯ ಮಹಾಪೂರ

Published On :

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಜಯ ಸಾಧಿಸಿದ ನಂತರ, ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಹಿಂದೆಂದಿಗಿಂತಲೂ ಇದೊಂದು ಅದ್ಭುತ ಜಯ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಬಣ್ಣಿಸಿದ್ದಾರೆ.
ರಾಜಕೀಯ ವ್ಯಕ್ತಿಗಳಿಂದ ಹಿಡಿದು ಕ್ರಿಕೆಟ್ ಅಭಿಮಾನಿಗಳವರೆಗೂ ಎಲ್ಲರೂ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಇನಿಂಗ್ಸ್ ಮತ್ತು 135 ರನ್‌ಗಳ ಅಂತರದಿಂದ ಜಯ ಸಾಧಿಸಿದ್ದು, ಕ್ರಿಕೆಟ್ ಆಟಗಾರರು ಸೇರಿದಂತೆ ಎಲ್ಲರಲ್ಲೂ ಇಲ್ಲದ ಸಂತಸ ಉಂಟುಮಾಡಿದೆ.
'ನಿರೀಕ್ಷಿಸದ ರೀತಿಯಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿದೆ. ಚೆನ್ನೈ ಮತ್ತು ಹೈದರಾಬಾದ್‌ನಲ್ಲಿ ಹೆಚ್ಚು ಅಂತರದಿಂದ ಜಯ ಕಂಡ ಭಾರತ ತಂಡದ ಆಟಗಾರರ ಮಾನಸಿಕ ಸ್ಥೈರ್ಯ ಹೆಚ್ಚಲಿದೆ' ಎಂದು ರಾಜೀವ್ ಶುಕ್ಲಾ ಹೇಳಿದ್ದಾರೆ.
'ಶಬಾಷ್ ಭಾರತ ಕ್ರಿಕೆಟ್ ತಂಡ! 3ನೇ ಟೆಸ್ಟ್‌ಗೂ ಮುನ್ನ ಆಸ್ಟ್ರೇಲಿಯಾಕ್ಕೆ ಯಾವುದೇ ರೀತಿಯ ಪ್ರಥಮ ದರ್ಜೆಯ ಅಭ್ಯಾಸ ಪಂದ್ಯಗಳಿಗೆ ಬಿಸಿಸಿಐ ಅವಕಾಶ ನೀಡಬಾರದು' ಎಂದು ಮಾನವ ಅಭಿವೃದ್ಧಿ ಸಂಪನ್ಮೂಲ ರಾಜ್ಯ ಸಚಿವ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.
'ಅದ್ಭುತ ವಿಜಯ, ಆಸ್ಟ್ರೇಲಿಯಾ ಪ್ರವಾಸದಲ್ಲಿ ತಂಡದಲ್ಲಿದ್ದ ನನಗೆ ಇಲ್ಲ ಸಂತಸ... ಜೀವನ ಒಂದು ವೃತ್ತ ಎಂದು ನಾವು ಈಗ ಹೇಳಬಹುದು. ಅಶ್ವಿನ್ ಬೌಲಿಂಗ್ ಸೂಪರ್, ಪೂಜಾರ್ ಮತ್ತು ವಿಜಯ್ ಸ್ಮರಣೀಯ ಜತೆಯಾಟ' ಎಂದು ಅಜಿಂಕ್ಯ ರಹಾನೆ ಟ್ವೀಟ್ ಮಾಡಿದ್ದಾರೆ.
'ಪೂಜಾರ, ವಿಜಯ್, ಭುವನೇಶ್ವರ, ಅಶ್ವಿನ್, ಜಡೇಜಾ ಸೇರಿದಂತೆ ಯುವ ಆಟಗಾರರ ಪಡೆ 2ನೇ ಟೆಸ್ಟ್ ಗೆಲ್ಲಲು ಭಾರತ ತಂಡಕ್ಕೆ ನೆರವಾಯಿತು' ಎಂದು ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.