ಕ್ರೀಡೆ

ಒಲಿಂಪಿಕ್ಸ್‌ನಲ್ಲಿ ಕುಸ್ತಿ ಉಳಿಸಿಕೊಳ್ಳಲು ಬೆಂಬಲ

Published On :

ನವದೆಹಲಿ: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕುಸ್ತಿಯನ್ನು ಉಳಿಸಿಕೊಳ್ಳುವ ಆಂದೋಲನಕ್ಕೆ ಮತ್ತಷ್ಟು ಬೆಂಬಲ ವ್ಯಕ್ತವಾಗಿದೆ. ರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಗಳ ಸಂಸ್ಥೆ (ಎಎನ್‌ಒಸಿ) ಇದಕ್ಕೆ ತನ್ನ ಬೆಂಬಲ ವ್ಯಕ್ತಪಡಿಸಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ, 2020ರ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಕುಸ್ತಿಯನ್ನು ಕೈಬಿಡಲು ಕಳೆದ ತಿಂಗಳು ಕೈಬಿಟ್ಟಿತ್ತು. ಹೀಗಾಗಿ ಮಾರ್ಚ್ 5ರಂದು ಸಿಡ್ನಿಯಲ್ಲಿ ನಡೆದ ಎಎನ್‌ಒಸಿ ಕಾರ್ಯನಿರ್ವಾಹಕ ಸಮಿತಿ ಸಭೆಯಲ್ಲಿ ಕುಸ್ತಿಯನ್ನು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಉಳಿಸಿಕೊಳ್ಳುವ ಬಗ್ಗೆ ತನ್ನ ನಿಲುವಳಿಯನ್ನು ಪಾಸ್ ಮಾಡಿದೆ. ಕುಸ್ತಿಯನ್ನು ಒಲಿಂಪಿಕ್ಸ್‌ನಲ್ಲಿ ಉಳಿಸಿಕೊಳ್ಳುವ ಕುರಿತು ಸಭೆಯಲ್ಲಿ ಎಲ್ಲ ಸದಸ್ಯರು ಸಹಮತ ವ್ಯಕ್ತಪಡಿಸಿದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಣಧೀರ್ ಸಿಂಗ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.