ಕ್ರೀಡೆ

ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಪ್ರಣಯ್ ಮೂರನೇ ಸುತ್ತಿಗೆ

Published On :

ಬಸೆಲ್: ಭಾರತದ ಬ್ಯಾಡ್ಮಿಂಟನ್ ತಾರೆ ಎಚ್.ಎಸ್ ಪ್ರಣಯ್ ಸ್ವಿಸ್ ಓಪನ್ ಪುರುಷರ ಸಿಂಗಲ್ಸ್ ವಿಭಾಗದ 3ನೇ ಸುತ್ತಿಗೆ ಪ್ರವೇಶಿಸಿದರೆ, ಪರುಪಲ್ಲಿ ಕಶ್ಯಪ್ ದ್ವಿತೀಯ ಸುತ್ತಿಗೆ ಪ್ರವೇಶಿಸಿದ್ದಾರೆ.
ದ್ವಿತೀಯ ಸುತ್ತಿನ ಪಂದ್ಯದಲ್ಲಿ ಪ್ರಣಯ್, ಥಾಯ್ಲೆಂಡ್‌ನ ಬೂನ್ಸಾಕ್ ಪೊನ್ಸಾನ್ ವಿರುದ್ಧ 18-21, 21-13, 21-12 ಸೆಟ್‌ಗಳ ಅಂತರದಿಂದ ವಿಜಯ ಸಾಧಿಸಿದರು.
ಇನ್ನು ಪಂದ್ಯಾವಳಿಯಲ್ಲಿ 5ನೇ ಶ್ರೇಯಾಂಕ ಪಡೆದಿರುವ ಕಶ್ಯಪ್, ಮೊದಲ ಸುತ್ತಿನ ಪಂದ್ಯದಲ್ಲಿ ಚೀನಾದ ಸುವಾನ್ ಯಿ ಸುಹಾ 21-7, 21-19 ಸೆಟ್‌ಗಳಿಂದ ಜಯ ಸಾಧಿಸುವ ಮೂಲಕ ದ್ವಿತೀಯ ಸುತ್ತಿಗೆ ಪ್ರವೇಶಿಸಿದರು. ಪ್ರಣಯ್ ಮೊದಲನೇ ಸುತ್ತಿನಲ್ಲಿ ಆಸ್ಟ್ರೀಯಾದ ಮೈಕಲ್ ಲಹನ್‌ಸ್ಟೈನರ್ ಅವರನ್ನು 18-21, 21-9, 21-12 ಸೆಟ್‌ಗಳ ಅಂತರದಿಂದ ಮಣಿಸಿದ್ದರು. ಆದರೆ, ಸೌರಭ್ ವರ್ಮಾ ಮತ್ತು ಶ್ರೀಕಾಂತ್ ತಮ್ಮ ಮೊದಲ ಸುತ್ತಿನಲ್ಲೇ ಸೋಲುವ ಮೂಲಕ ನಿರಾಸೆ ಮೂಡಿಸಿದರು. ಲಂಡನ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದ ಕಶ್ಯಪ್ ಮುಂದಿನ ಸುತ್ತಿನಲ್ಲಿ ಜರ್ಮನಿಯ ಡೀಟರ್ ಡೋಮ್ಕೆ ಅವರನ್ನು ಎದುರಿಸಲಿದ್ದಾರೆ. ಮಹಿಳೆಯರ ಸಿಂಗಲ್ಸ್ ಅರ್ಹತಾ ಸುತ್ತಿನ 2ನೇ ಪಂದ್ಯದಲ್ಲಿ ಅರುಂಧತಿ ಪಂತ್ವಾನೆಚೀನಾದ ಸನ್ ಯು ವಿರುದ್ಧ ಜಯ ಕಂಡುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.