ಮಳೆಯ ಕಾಟ: ಡ್ರಾ ಆದ ಇಂಗ್ಲೆಂಡ್-ಕಿವೀಸ್ ಟೆಸ್ಟ್
ವೆಲ್ಲಿಂಗ್ಟನ್: ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಡ್ರಾನಲ್ಲಿ ಅಂತ್ಯಗೊಂಡಿದೆ. ಸೋಮವಾರ ನಡೆಯಬೇಕಿದ್ದ ಅಂತಿಮ ದಿನದಾಟ ಮಳೆಯಿಂದ ರದ್ದಾದ ಹಿನ್ನೆಲೆಯಲ್ಲಿ, ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.
ತನ್ನ ಪ್ರಥಮ ಇನಿಂಗ್ಸ್ನಲ್ಲಿ 465 ರನ್ಗಳ ಬೃಹತ್ ಮೊತ್ತ ಪೇರಿಸಿದ್ದ ಇಂಗ್ಲೆಂಡ್ಗೆ ಉತ್ತರ ನೀಡಲು ಕ್ರೀಸ್ಗೆ ಇಳಿದಿದ್ದ ನ್ಯೂಜಿಲೆಂಡ್, ತನ್ನ ಪ್ರಥಮ ಇನಿಂಗ್ಸ್ನಲ್ಲಿ ಕೇವಲ 254 ರನ್ಗಳಿಗೆ ಆಲೌಟ್ ಆಗಿತ್ತು. ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ನಾಯಕ ಅಲೇಸ್ಟರ್ ಕುಕ್, ನ್ಯೂಜಿಲೆಂಡ್ ಮೇಲೆ ಫಾಲೋ ಆನ್ ಹೇರಿದರು.
ನಂತರ, ತನ್ನ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದ ನ್ಯೂಜಿಲೆಂಡ್, ಭಾನುವಾರ ದಿನಾಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತ್ತು. ಕೇನ್ ವಿಲಿಯಮ್ಸ್ನಸ್ 55 ರನ್ಗಳೊಂದಿಗೆ, ರಾಸ್ ಟೇಲರ್ 45 ರನ್ಗಳೊಂದಿಗೆ ಕ್ರೀಸ್ನಲ್ಲಿ ಉಳಿದಿದ್ದರು. ಇವರಿಬ್ಬರೂ ತಂಡವನ್ನು ಅಪಾಯದಿಂದ ಪಾರು ಮಾಡಬಹುದೆಂದು ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು.
ಆದರೆ, ಪಂದ್ಯದ ಅಂತಿಮ ದಿನವಾದ ಸೋಮವಾರ ಬೆಳಗ್ಗೆಯಿಂದಲೇ ಅಗಾಧವಾಗಿ ಮಳೆ ದಿನದಾಟ ನಡೆಯಲು ಅವಕಾಶವನ್ನೇ ನೀಡಲಿಲ್ಲ. ಇದರಿಂದಾಗಿ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.
ಡ್ಯೂನೇಡಿನ್ನಲ್ಲಿ ಮಾ. 6ರಿಂದ ಆರಂಭಗೊಂಡಿದ್ದ ಇಂಗ್ಲೆಂಡ್-ಕಿವೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯವೂ ಡ್ರಾ ಆಗಿತ್ತು. ಇದೀಗ, ಸರಣಿಯ ಮೂರನೇ ಪಂದ್ಯ ಮಾ. 22ರಂದು ನಡೆಯಲಿದೆ.
ಸಂಕ್ಷಿಪ್ತ ಸ್ಕೋರ್
ಇಂಗ್ಲೆಂಡ್ ಪ್ರಥಮ ಇನಿಂಗ್ಸ್ 465
ನ್ಯೂಜಿಲೆಂಡ್ ಪ್ರಥಮ ಇನಿಂಗ್ಸ್ 254
ನ್ಯೂಜಿಲೆಂಡ್ ದ್ವಿತೀಯ ಇನಿಂಗ್ಸ್ 162/2 (ಫಾಲೋ ಆನ್) (ಭಾನುವಾರ ದಿನಾಂತ್ಯಕ್ಕೆ)
ಫುಲ್ಟನ್ 45, ವಿಲಿಯಮ್ಸನ್ ಅಜೇಯ 55, ಟೇಲರ್ ಅಜೇಯ 41
ಬೌಲಿಂಗ್: ಆ್ಯಂಡರ್ಸನ್ 27/1, ಪನೇಸರ್ 44/1
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

