ಕ್ರೀಡೆ

ನಡಾಲ್, ಶರಪೊವಾ ಮಡಿಲಿಗೆ ಇಂಡಿಯನ್ ವೆಲ್ಸ್

Published On :

ಇಂಡಿಯನ್ ವೆಲ್ಸ್: ಖ್ಯಾತ ಟೆನಿಸ್ ಆಟಗಾರ ರಾಫೆಲ್ ನಡಾಲ್ ಈ ಬಾರಿಯ ಇಂಡಿಯನ್ ವೆಲ್ಸ್ ಟೆನಿಸ್ ಪಂದ್ಯಾವಳಿಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಸೋಮವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ನಡಾಲ್ ಅವರು, ಜುವಾನ್ ಮಾರ್ಟಿನ್ ಡೆಲ್ ಪೊಟ್ರೊ ಅವರನ್ನು 4-6, 6-3, 6-4 ಅಂತರದಲ್ಲಿ ಸೋಲಿಸಿದರು. ಸೋಮವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ರಷ್ಯಾದ ಟೆನಿಸ್ ಆಟಗಾರ್ತಿ ಮಾರಿಯಾ ಶರಪೊವಾ ಅವರು, ಕೆರೋಲಿನ್ ವೊಜ್ನಿಯಾಕಿ ಅವರನ್ನು ಅವರನ್ನು 6-2, 6-2 ಅಂತರದಲ್ಲಿ ಮಣಿಸಿ, ಪ್ರಶಸ್ತಿ ತಮ್ಮದಾಗಿಸಿಕೊಂಡರು.
ಸಾಧನೆ: ಇಂಡಿಯನ್ ವೆಲ್ಸ್ ಫೈನಲ್ ಪಂದ್ಯ ನಡಾಲ್ ಅವರ ವೃತ್ತಿಜೀವನದ 600ನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಜಯಗಳಿಸುವ ಮೂಲಕ, ಸೋಮವಾರ ಪ್ರಕಟಗೊಂಡ ವಿಶ್ವ ಟೆನಿಸ್ ರ್ಯಾಂಕಿಂಗ್ನಲ್ಲಿ ನಡಾಲ್, 4ನೇ ಸ್ಥಾನಕ್ಕೇರಿದ್ದಾರೆ. ಅತ್ತ, ಶರಪೊವಾ ಅವರು ಈ ಗೆಲುವಿನೊಂದಿಗೆ ವಿಶ್ವ ರ್ಯಾಂಕಿಂಗ್ನಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.