ಮುಷ್ತಾಕ್ ಅಲಿ ಟೂರ್ನಿಯಲ್ಲೂ ಮುಂದುವರಿದ ಸೆಹ್ವಾಗ್ ವೈಫಲ್ಯ
ಗುರ್ಗಾವ್: ಕೆಲವು ತಿಂಗಳುಗಳಿಂದ ಕಳಪೆ ಫಾರ್ಮ್ನಿಂದ ಕಂಗೆಟ್ಟಿದ್ದ ಭಾರತದ ಸ್ಫೋಟಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್, ಇಲ್ಲಿ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟಿ20 ಪಂದ್ಯಾವಳಿಯಲ್ಲೂ ಅವರ ವೈಫಲ್ಯ ಮುಂದುವರಿದಿದೆ.
ಆಸ್ಟ್ರೇಲಿಯಾದ ಆರಂಭಿಕ ಎರಡು ಟೆಸ್ಟ್ ಪಂದ್ಯಗಳಲ್ಲಿ ರನ್ಗಳಿಸಲು ಪರದಾಡಿದ ಸೆಹ್ವಾಗ್, ಅಂತಿಮ ಎರಡು ಪಂದ್ಯಗಳಿಗೆ ಭಾರತ ತಂಡದಿಂದ ಹೊರಗುಳಿದಿದ್ದರು.
ಬುಧವಾರ ನಡೆದ ಸೈಯದ್ ಮುಶ್ತಾಕ್ ಅಲಿ ಟಿ20 ಪಂದ್ಯಾವಳಿಯ ದೆಹಲಿ ಹಾಗೂ ಜಮ್ಮು ಮತ್ತು ಕಾಶ್ಮೀರ ನಡುವಿನ ಪಂದ್ಯದಲ್ಲಿ ಕೇವಲ 4 ರನ್ಗಳಿಸಿದ್ದು ಮತ್ತೆ ತಮ್ಮ ವೈಫಲ್ಯವನ್ನು ಮುಂದುವರಿಸಿದ್ದಾರೆ.
ದೆಹಲಿ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದಾಗ ಅಭಿಮಾನಿಗಳು ಸೆಹ್ವಾಗ್ ಅವರಿಂದ ಉತ್ತಮ ಬ್ಯಾಟಿಂಗ್ ನಿರೀಕ್ಷಿಸಿದ್ದರು. ಆದರೆ ಕೇವಲ 3 ಎಸೆತಗಳಲ್ಲಿ 4ರನ್ಗಳಿಸಿ ರಸೂಲ್ಗೆ ಕ್ಯಾಚ್ ನೀಡುವ ಮೂಲಕ ತಮ್ಮ ಇನಿಂಗ್ಸ್ ಅಂತ್ಯಗೊಳಿಸಿದ ಸೆಹ್ವಾಗ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.
ಆದರೆ ಮಿಂಲಿಂದ್ ಕುಮಾರ್ ಅವರ ಉತ್ತಮ ಬ್ಯಾಟಿಂಗ್ ಹಾಗೂ ರಜತ್ ಭಾಟಿಯಾ ಅವರ ಉತ್ತಮ ಬೌಲಿಂಗ್ ನೆರವಿನಿಂದ ದೆಹಲಿ, 17 ರನ್ಗಳ ಜಯ ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

