ಕ್ರೀಡೆ

'ಡಾನ್ ಬ್ರಾಡ್‌ಮನ್ ನೆನಪಿಸಿದ ಧವನ್‌'

Published On :

ನವದೆಹಲಿ: ಪದಾರ್ಪಣೆಯ ಪಂದ್ಯದಲ್ಲೇ ದಾಖಲೆಯ ಶತಕ ಸಿಡಿಸಿ ಎಲ್ಲರ ಗಮನ ಸೆಳೆದ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್‌ಗೆ ಎಲ್ಲೆಡೆಯಿಂದ ಪ್ರಶಂಸೆ ದೊರಕುತ್ತಿದೆ. ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಎಡ್ ಕೋವನ್ ಸಹ ಧವನ್ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮೊಹಾಲಿಯಲ್ಲಿ ಧವನ್ ಅವರ ಆಟ ಆಸೀಸ್‌ನ ಡಾನ್ ಬ್ರಾಡ್‌ಮನ್ ಅವರ ಆಟವನ್ನು ನೆನಪಿಸಿತು ಎಂದಿದ್ದಾರೆ.
ಧವನ್, ಕ್ರಿಕೆಟ್‌ನ ದಂತಕತೆ ಬ್ರಾಡ್‌ಮನ್‌ರಂತೆ ಬ್ಯಾಟಿಂಗ್ ನಡೆಸಿದ್ದು, ಇದುವರೆಗೂ ನಾನು ಕಂಡ ಅತ್ಯುತ್ತಮ ಅಂತಾರಾಷ್ಟ್ರೀಯ ಇನಿಂಗ್ಸ್‌ಗಳಲ್ಲಿ ಒಂದಾಗಿದೆ.
ಧವನ್ ತಮ್ಮ ಮೊದಲ ಪಂದ್ಯವನ್ನಾಡುತ್ತಿದ್ದು, ಪ್ರತಿ ಎಸೆತವನ್ನು ಅದರ ಮೌಲ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡಿದರು. ಕಳಪೆ ಹೊಡೆತಗಳಿಗೆ ಮುಂದಾಗಲಿಲ್ಲ ಎಂದು ಕೋವನ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.