ಕ್ರೀಡೆ

ಜಡೇಜಾ ಬುಟ್ಟಿಗೆ ಆಸೀಸ್ ನಾಯಕರು

Published On :

ನವದೆಹಲಿ: ಆಸೀಸ್ ವಿರುದ್ಧ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ, ಆ ತಂಡದ ನಾಯಕರ ವಿಕೆಟ್ ಪಡೆಯುವಲ್ಲಿ ಸ್ಪಿನ್ನರ್ ರವೀಂದ್ರ ಜಡೇಜಾ ಯಶಸ್ವಿಯಾಗಿದ್ದಾರೆ.
ಈ ಮುನ್ನ ನಡೆದ ಮೂರು ಟೆಸ್ಟ್ ಪಂದ್ಯಗಳ ಆರು ಇನಿಂಗ್ಸ್‌ಗಳಲ್ಲಿ 5 ಬಾರಿ ಆಸೀಸ್ ನಾಯಕ ಮೈಕಲ್ ಕ್ಲಾರ್ಕ್ ವಿಕೆಟ್ ಪಡೆಯುವಲ್ಲಿ ಜಡೇಜಾ ಯಶಸ್ವಿಯಾಗಿದ್ದರು. ಈಗ ನಾಲ್ಕನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಹಂಗಾಮಿ ನಾಯಕ ಶೇನ್ ವ್ಯಾಟ್ಸನ್ ವಿಕೆಟ್ ಕಬಳಿಸುವಲ್ಲಿ ಜಡೇಜಾ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ನಾಯಕರ ವಿಕೆಟ್ ಪಡೆಯುವಲ್ಲಿ ಜಡೇಜಾಗೆ ಇರುವ ವಿಶೇಷ ಆಸಕ್ತಿಯನ್ನು ಇದು ತೋರುತ್ತದೆ.
ಜಡೇಜಾ ಬೌಲಿಂಗ್‌ನಲ್ಲಿ ಕ್ಲಾರ್ಕ್ ಎರಡು ಬಾರಿ ಬೌಲ್ಡ್ ಎರಡು ಬಾರಿ ಸ್ಟಂಪ್ ಹಾಗೂ ಒಂದು ಬಾರಿ ಕ್ಯಾಚ್ ನೀಡಿದ್ದಾರೆ.
ಇದರೊಂದಿಗೆ ಜಡೇಜಾ ಸರಣಿಯಲ್ಲಿ ಒಟ್ಟು 17 ವಿಕೆಟ್ ಕಬಳಿಸಿದ್ದು, 33 ರನ್ ನೀಡಿ 3 ವಿಕೆಟ್ ಕಬಳಿಸಿದ್ದು ಅವರ ಶ್ರೇಷ್ಠ ಸಾಧನೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.