ನೂರರ ಗಡಿ ಮುಟ್ಟಿದ ಪ್ರಗ್ಯಾನ್
ನವದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಆಸೀಸ್ ವಿರುದ್ಧದ ಟೆಸ್ಟ್ ಪಂದ್ಯದ ಶನಿವಾರದ ದಿನದಾಟದಲ್ಲಿ, ಭಾರತದ ಎಡಗೈ ಸ್ಪಿನ್ನರ್ ಪ್ರಗ್ಯಾನ್ ಓಜಾ ಅವರು, ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 100 ವಿಕೆಟ್ ಗಡಿಯನ್ನು ಮುಟ್ಟಿದ ಸಾಧನೆ ಮಾಡಿದರು. ಇನಿಂಗ್ಸ್‌ನ 113ನೇ ಓವರ್‌ನಲ್ಲಿ ಪ್ಯಾಟಿನ್ಸನ್ ವಿಕೆಟ್ ಪಡೆಯುವ ಮೂಲಕ ಅವರು, ಅವರು ಈ ಸಾಧನೆ ಮಾಡಿದ್ದಾರೆ. 22 ಪಂದ್ಯಗಳಲ್ಲಿ 100 ವಿಕೆಟ್ ಪಡೆದಿರುವ, ಕಡಿಮೆ ಪಂದ್ಯಗಳಲ್ಲಿ 100 ವಿಕೆಟ್ ಸಾಧನೆ ಮಾಡಿದ ಭಾರತದ ಮೂರನೇ ಸ್ಪಿನ್ನರ್ ಎಂಬ ಕೀರ್ತಿಗೂ ಅವರು ಪಾತ್ರರಾಗಿದ್ದಾರೆ. ಎರ್ರಪಳ್ಳಿ ಪ್ರಸನ್ನ ಅವರು 20 ಪಂದ್ಯಗಳಲ್ಲಿ 100 ವಿಕೆಟ್ ಪಡೆದರೆ, ಅನಿಲ್ ಕುಂಬ್ಳೆ 21 ಪಂದ್ಯಗಳಲ್ಲಿ 100 ವಿಕೆಟ್ ಸಾಧನೆ ಮಾಡಿದ್ದರು. 2009ರಲ್ಲಿ ಶ್ರೀಲಂಕಾ ವಿರುದ್ಧ ಕಾನ್ಪುರದಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಪದಾರ್ಪಣೆ ಮಾಡಿದ್ದ ಓಜಾ ಅವರು ವೆಸ್ಟ್ ಇಂಡೀಸ್ ಪರ ಮುಂಬೈನಲ್ಲಿ 2011ರಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ 47 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು. ಅದು ಅವರ ವೃತ್ತಿಜೀವನದಲ್ಲಿ ಈವರೆಗಿನ ಶ್ರೇಷ್ಠ ಪ್ರದರ್ಶನವಾಗಿದೆ. ಒಟ್ಟಾರೆಯಾಗಿ, ಓಜಾ ಅವರು ಈ ಸಾಧನೆ ಮಾಡಿದ ಭಾರತದ 18ನೇ ಬೌಲರ್, ವಿಶ್ವದ 163ನೇ ಬೌಲರ್ ಆಗಿ ಹೊರಹೊಮ್ಮಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

