ಭಾರತದ ಅಗ್ರ ಸ್ಥಾನ ಅಬಾಧಿತ

ದುಬೈ: ಐಸಿಸಿ ಬಿಡುಗಡೆ ಮಾಡಿರುವ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯ ಭಾರತ ಅಗ್ರ ಸ್ಥಾನದಲ್ಲಿ ಮುಂದುವರಿದಿದೆ. 119 ಅಂಕಗಳೊಂದಿಗೆ ಭಾರತ ಅಗ್ರ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಂತರದ ಸ್ಥಾನದಲ್ಲಿವೆ.
ಸೋಮವಾರ ಬಿಡುಗಡೆಯಾದ ರ್ಯಾಂಕಿಂಗ್ ಪಟ್ಟಿಯಲ್ಲಿ 117 ಅಂಕಗಳನ್ನು ಹೊಂದಿರುವ ಇಂಗ್ಲೆಂಡ್ ಭಾರತಕ್ಕೆ ಹತ್ತಿರದ ಸ್ಪರ್ಧಿಯಾಗಿದೆ. ಇನ್ನು 116 ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ಸಹ ಅಗ್ರ ಸ್ಥಾನಕ್ಕಾಗಿ ಪೈಪೋಟಿ ನಡೆಸಿದೆ.
ಹೀಗಾಗಿ ಏಪ್ರಿಲ್ 1ರ ವರೆಗೆ ಭಾರತ ತಂಡ ಅಗ್ರ ಸ್ಥಾನದಲ್ಲಿ ಮುಂದುವರಿದರೆ, ಐಸಿಸಿಯಿಂದ ಅಂದಾಜು # 95 ಲಕ್ಷ ಮತ್ತು ಶೀಲ್ಡ್ ಪಡೆದುಕೊಳ್ಳಲಿದೆ. ಇನ್ನು ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡ ಂದಾಜು # 40 ಲಕ್ಷ ಸ್ವೀಕರಿಸಲಿದೆ.
ಇನ್ನು ಬ್ಯಾಟಿಂಗ್ನಲ್ಲಿ ಉದಯೋನ್ಮುಖ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (812 ಅಂಕ) ಮತ್ತು ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (784 ಅಂಕ) 3ನೇ ಮತ್ತು 4ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಭಾರತದ ಇನ್ನಿಬ್ಬರು ಬ್ಯಾಟ್ಸ್ಮನ್ಗಳಾದ ಸುರೇಶ್ ರೈನಾ 12ನೇ ಸ್ಥಾನದಲ್ಲಿದ್ದರೆ, ತಂಡದಿಂದ ಕೈಬಿಡಲಾಗಿರುವ ಗೌತಮ್ ಗಂಭೀರ್ 15ನೇ ಸ್ಥಾನದಲ್ಲಿದ್ದಾರೆ.
ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಮತ್ತು ಹಶೀಂ ಆಮ್ಲಾ ಬ್ಯಾಟಿಂಗ್ ವಿಭಾಗದ ಮೊದಲ ಮತ್ತು ದ್ವಿತೀಯ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಸ್ಪಿನ್ನರ್ ರವೀಂದ್ರ ಜಡೇಜಾ 2 ಸ್ಥಾನ ಬಡ್ತಿ ಪಡೆದಿದ್ದು 7ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ಸ್ಪಿನ್ನರ್ ಸೈಯೀದ್ ಅಜ್ಮಲ್ ಆಗ್ರ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


