ಕ್ರೀಡೆ

ಮೇ 4, 6ರ ಪಂದ್ಯಗಳು ಸ್ಥಳಾಂತರ ಸಾಧ್ಯತೆ

Published On :

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬರುವ ಮೇ 4 ಮತ್ತು 6ರಂದು ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರಿಸುವ ಅಥವಾ ವೇಳಾಪಟ್ಟಿಯನ್ನು ಬದಲಾಯಿಸುವ ಸಾಧ್ಯತೆಗಳಿವೆ.
'ರಾಜ್ಯದಲ್ಲಿ ಚುನಾವಣೆಗಳು ನಡೆಯುವ ಹಿನ್ನೆಲೆಯಲ್ಲಿ ಮೇ 4 ಮತ್ತು 6ರಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳನ್ನು ಸ್ಥಳಾಂಥರಿಸಲು ಅಥವಾ ವೇಳಾಪಟ್ಟಿಯನ್ನು ಬದಲಾಯಿಸಲಾಗುವುದು. ಒಂದೆರಡು ದಿನಗಳಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು' ಎಂದು ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 5ರಿಂದ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 8ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ಸಂದರ್ಭದಲ್ಲಿ ಪಂದ್ಯಗಳಿಗೆ ಭದ್ರತೆಯನ್ನು ಒದಗಿಸಲು ಸಾಧ್ಯವಿಲ್ಲ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಜೋತಿ ಪ್ರಕಾಶ್ ಮಿರ್ಜಿ ಹೇಳಿದ ನಂತರ, ಈ ಬಗ್ಗೆ ಕೆಎಸ್‌ಸಿಎ ಸಭೆ ನಡೆಸಿದೆ. ಮೇ 4 ಮತ್ತು 6ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕ್ರಮವಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ವಿರುದ್ಧ ಸೆಣೆಸಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.