ಕ್ರೀಡೆ

ರ್ಯಾಂಕಿಂಗ್: ಮೂರಕ್ಕೇರಿದ ಭಾರತ

Published On :

ದುಬೈ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಜಯ ಸಾಧಿಸಿದ ಭಾರತ ತಂಡ, ಮಂಗಳವಾರ ಬಿಡುಗಡೆ ಮಾಡಲಾಗಿರುವ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.
ಆಕ್ಲೆಂಡ್‌ನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆದ 3ನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಭಾರತ 3ನೇ ಸ್ಥಾನಕ್ಕೇ ತೃಪ್ತಿಪಡಬೇಕಾಯಿತು.
ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಪಂದ್ಯದಲ್ಲಿ ಗೆಲ್ಲುವ ಮೂಲಕ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಿವೀಸ್ ಪಡೆ ಗೆದ್ದಿದ್ದರೆ, ಭಾರತ 2ನೇ ಸ್ಥಾನಕ್ಕೇರುತ್ತಿತ್ತು. ಒಂದು ವೇಳೆ ಭಾರತ ಏಪ್ರಿಲ್ 1ಕ್ಕೆ ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನಲ್ಲಿ 2ನೇ ಸ್ಥಾನ ಪಡೆದಿದ್ದರೆ, ಅಂದಾಜು ರು. 19,008,224 ಬಹುಮಾನ ಪಡೆಯುತ್ತಿತ್ತು. ಆದರೆ, ಈ 3ನೇ ಸ್ಥಾನ ಪಡೆದಿರುವ ಭಾರತ ಅಂದಾಜು ರು. 13,580,953 ಬಹುಮಾನ ಪಡೆಯಲಿದೆ. ಇನ್ನು 4ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಅಂದಾಜು ರು. 8,149,613 ಬಹುಮಾನ ಪಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 4-0 ಅಂತರದಿಂದ ಸರಣಿ ಗೆದ್ದ ಭಾರತ ತಂಡ 7 ರ್ಯಾಂಕಿಂಗ್ ಪಾಯಿಂಟ್‌ಗಳನ್ನು ಪಡೆಯುವುದರೊಂದಿಗೆ 112 ಅಂಕಗಳೊಂದಿಗೆ ಋತುವನ್ನು ಅಂತ್ಯಗೊಳಿಸಿದೆ. ಕಿವೀಸ್ ವಿರುದ್ಧ ಮೂರು ಟೆಸ್ಟ್ ಪಂದ್ಯಗಳಲ್ಲಿ ಡ್ರಾ ಸಾಧಿಸಿದ ಇಂಗ್ಲೆಂಡ್ ನಾಲ್ಕು ಪಾಯಿಂಟ್‌ಗಳನ್ನು ಕಳೆದುಕೊಂಡಿದೆ. 128 ಅಂಕಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದು, ಐಸಿಸಿಯಿಂದ ಅಂದಾಜು ರು. 24,450,779 ಬಹುಮಾನ ಪಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.